ಯಾದಗಿರಿ: ಕೃಷಿಯಲ್ಲಿ ರಾಸಾಯನಿಕ ಕ್ರಿಮಿನಾಶಕಗಳ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಉಳಿಸಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಅಮರೇಶ ವೈ.ಎಸ್., ಸಲಹೆ ನೀಡಿದರು.

ಜಿಲ್ಲೆಯ ಕವಡಿಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ಸಸ್ಯ ಆರೋಗ್ಯ ನಿರ್ವಹಣಾ ಸಂಸ್ಥೆ ಹೈದರಾಬಾದ್ ಮತ್ತು ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ‘ಕೃಷಿಯಲ್ಲಿ ರಾಸಾಯನಿಕ ಕ್ರಿಮಿನಾಶಕಗಳ ಬಳಕೆಯಲ್ಲಿ ಸುರಕ್ಷಿತ ಕ್ರಮಗಳು’ ಕುರಿತು ಸುರಪುರ ತಾಲ್ಲೂಕಿನ ರೈತರಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಸಾಯನಿಕ ಕ್ರಿಮಿನಾಶಕ ಬಳಕೆ ಮಾಡುವಾಗ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಿವರಿಸಿದರು.

ಡಾ.ಉದಯ ಬಾನು ರಾಸಾಯನಿಕ ಕ್ರಿಮಿನಾಶಕಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸಿದರು. ವಿಜ್ಞಾನಿ ಡಾ.ಉಮೇಶ ಬಾರಿಕರ ಸುರಕ್ಷತಾ ಕವಚಗಳ ಬಳಕೆಯ ಪ್ರಾತ್ಯಕ್ಷಿತೆ ಮಾಡಿ ತೋರಿಸಿದರು. ವಿಜ್ಞಾನಿಗಳಾದ ಡಾ.ಮಹೇಶ, ಡಾ.ಸತೀಶ, ಡಾ.ಶಾಂತವೀರಯ್ಯ, ಸುಮಂಗಲಾ ಮತ್ತು ಪಲ್ಲವಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ತರಬೇತಿ ಕಾರ್ಯಕ್ರಮದಲ್ಲಿ ಸುಮಾರು 30 ರೈತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.