ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರಮಯೋಗಿ ಮಾನ್‍ಧನ್‌ಗೆ ಹೆಸರು ನೋಂದಾಯಿಸಿ

Last Updated 18 ಡಿಸೆಂಬರ್ 2019, 15:28 IST
ಅಕ್ಷರ ಗಾತ್ರ

ಯಾದಗಿರಿ: ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕೇಂದ್ರಸರ್ಕಾರವು ’ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ಧನ್ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಕಾರ್ಮಿಕರು ಈ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡು ಸದುಪಯೋಗ ಪಡೆಯಬೇಕು ಎಂದು ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರ ಸಿಂಗ್ ಠಾಕೂರ್ ಹೇಳಿದರು.

ನಗರದ ಇ.ಎಸ್.ಐ (ಬೀದಿ ಕಾರ್ಮಿಕರ) ಆಸ್ಪತ್ರೆಯಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್ (ಪಿ.ಎಂ.ಎಸ್.ವೈ.ಎಂ) ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಯೋಜನೆ ಮಾಹಿತಿ ನೀಡಲು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‌‌‌

ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ 42 ಕೋಟಿ ಕಾರ್ಮಿಕರಿಂದ ಉತ್ಪಾದನೆಯಾಗುತ್ತಿದೆ. ನಮ್ಮ ದೈನಂದಿನ ಜೀವನದಲ್ಲಿ ಗೃಹ ಆಧಾರಿತ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟ ಸಿದ್ಧಪಡಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು, ಸೇರಿದಂತೆ ಇತರೆ ವಿವಿಧ ವಲಯಗಳಲ್ಲಿ ಕೆಲಸ ನಿರ್ವಹಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹ ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧದ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಎಂಬ ಮಹತ್ವಾಕಾಂಕ್ಷಿ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುತ್ತದೆ. ಕೂಡಲೇ ಸಂಬಂಧಿಸಿದ ವಲಯಗಳ ಕಾರ್ಮಿಕರು ತಪ್ಪದೇ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.

ವೈದ್ಯಾಧಿಕಾರಿ ಡಾ.ಕೆ.ವಿಕ್ರಾಂತ್, ಪಾವನಿ ಕೆ., ಫಾರ್ಮಾಸಿಸ್ಟ್ ವೆಂಕಟೇಶ, ಶಂಕರ ಕಲಗಿ, ಸುಧಾ, ಯಲ್ಲಾಲಿಂಗ, ಕಾರ್ಮಿಕ ಇಲಾಖೆಯ ಶಿವರುದ್ರ, ಜಿಲ್ಲಾ ಮೆಕ್ಯಾನಿಕ್ ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಚವ್ಹಾಣ, ಕಾರ್ಯದರ್ಶಿ ಇಮ್ರಾನ್ ಖಾಜಿ ಡೈಮಂಡ್ ಹಾಗೂ ಕಾರ್ಮಿಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT