ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ | ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶ 2 ವಾರ ಮುಂದೂಡಿಕೆ

Last Updated 8 ಜೂನ್ 2020, 5:57 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಈಗಾಗಲೇ 15ಕ್ಕಿಂತ ಹೆಚ್ಚು ನಿಯಂತ್ರಿತ ವಲಯಗಳ ಅಧಿಸೂಚನೆ ಹೊರಡಿಸಿರುವುದರಿಂದ ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ಎರಡು ವಾರಗಳವರೆಗೆ ಮುಂದೂಡಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರು ಆದೇಶ ಹೊರಡಿಸಿದ್ದಾರೆ.

ಸರ್ಕಾರದಿಂದ ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕಾಗಿ ಜೂನ್ 8ರಿಂದ ಅನುಮತಿಸಲಾಗಿತ್ತು. ಆದರೆ, ಜಿಲ್ಲೆಯಲ್ಲಿ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯು ನೀಡಿರುವ ಸಲಹೆ ಮೇರೆಗೆ ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು
ಎರಡು ವಾರಗಳವರೆಗೆ ಮುಂದೂಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT