ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯಾದಗಿರಿ | ‘ಆನ್‌ಲೈನ್ ವಂಚನೆ: ತಕ್ಷಣ ದೂರು ನೀಡಿ’

Published 18 ಆಗಸ್ಟ್ 2024, 14:25 IST
Last Updated 18 ಆಗಸ್ಟ್ 2024, 14:25 IST
ಅಕ್ಷರ ಗಾತ್ರ

ಯಾದಗಿರಿ: ಸಾಮಾಜಿಕ ಜಾಲತಾಣಗಳಾದ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ನ ನಕಲಿ ಖಾತೆಗಳನ್ನು ಸೃಷ್ಟಿ ಮಾಡಿ ಡಿಪಿಗೆ ಜಿಲ್ಲಾಧಿಕಾರಿ ಹೆಸರು ಮತ್ತು ಫೋಟೋವನ್ನು ಬಳಕೆ ಮಾಡಿ ಸಾರ್ವಜನಿಕರಿಗೆ, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು  ಮಟ್ಟದ ಅಧಿಕಾರಿಗಳಿಗೆ ಮೆಸೇಜ್ ಮಾಡಿ ಹಣದ ಬೇಡಿಕೆಯಿಟ್ಟು ವಂಚನೆ ಮಾಡುವುದು ಕಂಡು ಬಂದರೆ ತಕ್ಷಣ ದೂರು ನೀಡಬೇಕು’ ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ತಿಳಿಸಿದ್ದಾರೆ.

ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿ ಮಾಡಿ ಜಿಲ್ಲಾಧಿಕಾರಿ ಹೆಸರು ಮತ್ತು ಡಿಪಿಯಲ್ಲಿ ಫೋಟೊ ಬಳಸಿಕೊಂಡು ವಂಚನೆ ಮಾಡಲು ಯತ್ನಿಸುವ ಪ್ರಕರಣಗಳು ಕಂಡು ಬಂದಿದ್ದು, ಸೈಬರ್ ಕ್ರೈಂನಲ್ಲಿ ದೂರು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಅಧಿಕಾರಿಗಳು ಹಾಗೂ ಸಾರ್ವಜನಿಕರು ಆನ್‌ಲೈನ್ ವಂಚಕರ ಫೋನ್ ಮತ್ತು ಮೆಸೇಜ್‌ಗಳು ಬಂದಾಗ ಎಚ್ಚರಿಕೆಯಿಂದ ಮೊಬೈಲ್ ಬಳಕೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT