ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವ: ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಧ್ವಜಾರೋಹಣ

Last Updated 26 ಜನವರಿ 2022, 4:51 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಅವರು 73ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಕೋವಿಡ್, ಓಮೈಕ್ರಾನ್ ತಡೆಗಟ್ಟಲು ಎಲ್ಲರೂ ಲಸಿಕೆ ಪಡೆಯಬೇಕು‌. ಹಿರಿಯ ನಾಗರಿಕರು ಬೂಸ್ಟರ್ ಡೋಸ್ ಪಡೆಯಬೇಕು. ಎಲ್ಲರೂ ಲಸಿಕೆ ಪಡೆದು ಕೋವಿಡ್ ನಿಯಮ ಪಾಲನೆ ಮಾಡಬೇಕು. ಅಂತರ ಕಾಪಾಡಿಕೊಳ್ಳಬೇಕು. ಜನ ಹೆಚ್ಚು ಸೇರಬಾರದು ಎಂದರು.

ನಾನು ಪಶು ಸಂಗೋಪನೆ ಇಲಾಖೆ ವಹಿಸಿಕೊಂಡ ನಂತರ ಗೋ ಮಾತೆಯನ್ನು ರಕ್ಷಿಸಲು ಗೋ ಹತ್ಯೆ ನಿಷೇಧಿಸಲಾಗಿದೆ.
ಸಹಾಯವಾಣಿ ಕೇಂದ್ರ ಅರಂಭಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಗೆ 400 ವೈದ್ಯರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದುಕೊಳ್ಳಲಾಗುತ್ತದೆ ಎಂದರು.

ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಮಂಜೂರು ಮಾಡಲಾಗಿದೆ. ಹಣ ಬಿಡುಗಡೆ ಮಾಡಲಾಗಿದೆ. ಎಲ್ಲರಿಗೂ ಸರ್ಕಾರದ ಯೋಜನೆ ತಲುಪಬೇಕು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದರು.

ಎರಡನೇ ಬಾರಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೇನೆ. ಕೆಲಸ ಮಾಡಿ ತೋರಿಸುತ್ತೇನೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಯಾದಗಿರಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಅವರು ವಿಡಿಯೊ ಸಂವಾದ ನಡೆಸಿದ್ದಾರೆ. ಇದರಿಂದ ಜಿಲ್ಲೆಯ ಅಭಿವೃದ್ಧಿ ಆಗಲಿದೆ ಎಂದರು.

ಕೋವಿಡ್ ನಿಂದ ಮೃತಪಟ್ಟ 188 ಜನರಿಗೆ ಪರಿಹಾರ ಧನ ವಿತರಿಸಲಾಗಿದೆ. ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳ ಅಭಿವೃದ್ಧಿ ನಮ್ಮ ಗುರಿಯಾಗಿದೆ ಎಂದರು.

ಶಾಸಕ ವೆಂಕಟರೆಡ್ಡಿ ಮುದ್ನಾಳ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ಯೂಡಾ ಅಧ್ಯಕ್ಷ ಬಸವರಾಜ ಚಂಡ್ರಿಕಿ, ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್, ಎಸ್ಪಿ ಡಾ.ಸಿ.ಬಿ.ವೇದಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಉಪವಿಭಾಗಾಧಿ ಪ್ರಶಾಂತ ಹನಗಂಡಿ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ನಗರಸಭೆ ಪ್ರಭಾರಿ ಪೌರಾಯುಕ್ತ ಬಕ್ಕಪ್ಪ ಹೊಸಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT