ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಲು ಮನವಿ

ಸ್ವಯಂ ಪ್ರೇರಿತವಾಗಿ ಪರೀಕ್ಷೆ ಮಾಡಿಸಿಕೊಂಡ ಜಿಲ್ಲಾಧಿಕಾರಿ
Last Updated 5 ಜುಲೈ 2020, 15:45 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯನ್ನು ಕೋವಿಡ್ ಮುಕ್ತಗೊಳಿಸಲು ಸಾರ್ವಜನಿಕರು ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಿಸಿಕೊಳ್ಳಲುಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ದುರ್ಬಲ ವರ್ಗ ಮತ್ತು ಜನರ ಹೆಚ್ಚಿನ ಸಂಪರ್ಕ ಇರುವವರು, ಯಾವುದೇ ಕೋವಿಡ್ ರೋಗ ಲಕ್ಷಣಗಳು ಇಲ್ಲದಿದ್ದರೂ ಸ್ವಯಂ ಪ್ರೇರಿತರಾಗಿ ಹಾಗೂ ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇರುವವರು ಕಡ್ಡಾಯವಾಗಿ ಪರೀಕ್ಷೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್-19 ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಕೋವಿಡ್ ಪರೀಕ್ಷೆ ಮಾಡಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ. ಕೋವಿಡ್ ರೋಗಾಣುವನ್ನು ಶೀಘ್ರವಾಗಿ ಪತ್ತೆ ಹಚ್ಚುವುದರಿಂದ ಕೋವಿಡ್ ರೋಗಾಣು ಹರಡುವಿಕೆಯನ್ನು ತಡೆಗಟ್ಟಬಹುದು. ಇತ್ತೀಚೆಗೆ ಕೆಲವೊಂದು ಪ್ರಕರಣಗಳು ಯಾವುದೇ ಪ್ರವಾಸದ ಹಿನ್ನೆಲೆ ಇಲ್ಲದಿದ್ದರೂ ಕೋವಿಡ್-19 ಸಕಾರಾತ್ಮಕ ಪ್ರಕರಣಗಳು ಪತ್ತೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಹಾಗೂ ತಾಲ್ಲೂಕಿನಲ್ಲಿ ಗಂಟಲು ದ್ರವ ಸಂಗ್ರಹಿಸಲು ಮೊಬೈಲ್ ವ್ಯಾನ್‍ಗಳ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲಾಧಿಕಾರಿ ಪರೀಕ್ಷೆ:‌ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಿದ್ದ ಶಿಬಿರದಲ್ಲಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಅವರು ಸ್ವಯಂ ಪ್ರೇರಿತರಾಗಿ ಕೋವಿಡ್-19 ಪರೀಕ್ಷೆಗಾಗಿ ಗಂಟಲು ದ್ರವ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT