ಗುರುವಾರ , ಅಕ್ಟೋಬರ್ 29, 2020
27 °C
ಬಿಜೆಪಿ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿ, ಎಸ್‌ಪಿಗೆ ಮನವಿ

ಡ್ರಗ್ಸ್ ಮುಕ್ತ ರಾಜ್ಯಕ್ಕಾಗಿ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಮಾದಕ ವಸ್ತು ಮಾರಾಟ ಜಾಲವನ್ನು ಬೇರು ಸಮೇತ ಕಿತ್ತು ಹಾಕಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಶರಣಭೂಪಾಲರಡ್ಡಿ ಮಾತನಾಡಿ, ದೇಶದ ಶಕ್ತಿಯಾಗಿರುವ ಯುವ ಜನತೆ ಡ್ರಗ್ಸ್‌ಗೆ ಮಾರುಹೋಗಿ ತಮ್ಮ ಬದುಕು ನಾಶ ಮಾಡಿಕೊಳ್ಳುತ್ತಿದ್ದಾರೆ. ಹಿಂದಿನ ಯಾವ ಸರ್ಕಾರಗಳು ಇಂಥ ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡು ಡ್ರಗ್ಸ್ ಜಾಲವನ್ನು ಭೇದಿಸಲು ಮುಂದಾಗಿರಲಿಲ್ಲ. ಹೀಗಾಗಿ ಇದು ಎಲ್ಲೆಡೆ ಹರಡಿಕೊಂಡಿದೆ. ಇದನ್ನು ಬೇರು ಸಮೇತ ಕಿತ್ತು ಹಾಕಬೇಕು. ರಾಜ್ಯದ ಮಾನ ಕೆಡಿಸಿರುವ ಇಂಥ ವಿಷಯಗಳನ್ನು ಮಟ್ಟ ಹಾಕಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮೌನೇಶ ಬೆಳಗೇರ ಮಾತನಾಡಿ, ಹಲವಾರು ವರ್ಷಗಳಿಂದ ಡ್ರಗ್ಸ್ ಹಾವಳಿಯಿಂದ ಸಮಾಜದಲ್ಲಿ ಸ್ವಾಸ್ಥ್ಯ ಸಂಪೂರ್ಣ ಹಾಳಾಗುತ್ತಿದೆ. ಅದಕ್ಕೆ ಸರ್ಕಾರ ಮತ್ತು ಪಕ್ಷ ಕಡಿವಾಣ ಹಾಕುವ ಮೂಲಕ ಹೊಸ ವಾತಾವರಣ ಸೃಷ್ಟಿ ಮಾಡಿದೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಣ್ಣಗೌಡ ಗುರುಸುಣಿಗಿ, ಪರಮಣ್ಣಗೌಡ ಸದಬ ಸುರಪುರ, ಜಿಲ್ಲಾ ಮಾಧ್ಯಮ ಪ್ರಮುಖ ವಿರುಪಾಕ್ಷಯ್ಯ ಸ್ವಾಮಿ ಹೆಡಗಿಮದ್ರಾ, ಕೖಷ್ಣಾರಡ್ಡಿ ಬಬಲಾದಿ, ಶರಣಗೌಡ ಕನ್ಯಕೊಳ್ಳೂರ, ಮಲ್ಲು ಕೋಲಿವಾಡ, ರಾಜು ಪಂಚಬಾವಿ, ಮಲ್ಲುಸ್ವಾಮಿ ಗುರುಸುಣಿಗಿ, ಮುಸ್ತಫಾ ಪಟೇಲ್, ಭೀಮರಾಯ ಕೊಲ್ಕರ, ಯುವ ಮೋರ್ಚಾದ ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.