ಶನಿವಾರ, ಫೆಬ್ರವರಿ 27, 2021
31 °C
ರಾಜ್ಯದಲ್ಲಿ ಬಿಜೆಪಿಯ ನಾಲ್ವರು ಶಾಸಕರು ಆಯ್ಕೆ

ಡಿಸಿಎಂ ಸ್ಥಾನ ನೀಡಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ನೂತನವಾಗಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಮಾದಿಗ ಸಮುದಾಯದವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮಾದಿಗ ಸಮುದಾಯದ ಹಿರಿಯ ಮುಖಂಡ ದೇವೇಂದ್ರ ಕೆ. ನಾದ ಒತ್ತಾಯಿಸಿದರು.

ರಾಜ್ಯದಲ್ಲಿ ದೊಡ್ಡ ಸಮುದಾಯವಾಗಿರುವ ಮಾದಿಗ ಸಮುದಾಯಕ್ಕೆ ಆದ್ಯತೆ ನೀಡಬೇಕು. ರಾಜ್ಯದಲ್ಲಿ ಮಾದಿಗ ಸಮುದಾಯದ ಬಿಜೆಪಿ ವತಿಯಿಂದ ನಾಲ್ವರು ಶಾಸಕರು ಆಯ್ಕೆಯಾಗಿದ್ದಾರೆ. ಹಿರಿಯರಾದ ಗೋವಿಂದ ಕಾರಜೋಳ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ, ದುರ್ಯೋಧನ ಐಹೋಳೆಯವರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಮಾದಿಗ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ ಮಾತನಾಡಿ, ಬಾಗಲಕೋಟ ಜಿಲ್ಲೆಯ ಪ್ರಭಾವಿ ದಲಿತ ನಾಯಕ ಗೋವಿಂದ ಕಾರಜೋಳ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರಿಗೆ ಸಚಿವ ಸಂಪುಟದಲ್ಲಿ ಪ್ರಮುಖ ಸ್ಥಾನ ನೀಡಬೇಕು. ಅಲ್ಲದೆ ಬಹುಸಂಖ್ಯಾತರು ಹೆಚ್ಚಿದ್ದು, ಅವರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಮಾಡಿದರು.

ಮಾದಿಗ ಸಮುದಾಯದ ಮುಖಂಡರಾದ ‌ಎಂ.ಕೆ.ಬೀರನೂರ, ಗೋಪಾಲ ದಾಸನಕೇರಿ, ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೇರಿ, ಲಿಂಗಪ್ಪ ವಡ್ನಳ್ಳಿ, ಶಿವು ಮುದ್ನಾಳ ಇದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.