ಸುರಪುರ: ‘ಸಚಿವ ಪ್ರಿಯಾಂಕ್ ಖರ್ಗೆ ಮೇಲೆ ಬಿಜೆಪಿ ಮುಖಂಡರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಭಾರತೀಯ ದಲಿತ ಪ್ಯಾಂಥರ್ ರಾಜ್ಯ ಸಮಿತಿ ಸಂಘಟನಾ ಕಾರ್ಯದರ್ಶಿ ಆದಪ್ಪ ಹೊಸಮನಿ ಆರೋಪಿಸಿದ್ದಾರೆ.

‘ಸಚಿನ್ ಪಾಂಚಾಳ್ ಅವರ ಡೆತ್ ನೋಟ್ನಲ್ಲಿ ಪ್ರಿಯಾಂಕ್ ಅವರ ಹೆಸರು ಇಲ್ಲ. ಪ್ರಿಯಾಂಕ್ ಅವರು ಸ್ವತಃ ಮುಖ್ಯಮಂತ್ರಿಗಳಿಗೆ ಪ್ರಕರಣವನ್ನು ಸಿ.ಐ.ಡಿ.ಗೆ ವಹಿಸುವಂತೆ ಮನವಿ ಮಾಡಿದ್ದಾರೆ. ಇಷ್ಟಿದ್ದರೂ ವಿರೋಧ ಪಕ್ಷದವರು ಇಲ್ಲ ಸಲ್ಲದ ಆರೋಪ ಮಾಡಿ ಖರ್ಗೆ ತೇಜೋವಧೆಗೆ ಯತ್ನಿಸುತ್ತಿರುವುದು ಸರಿಯಲ್ಲ’ ಎಂದು ಮೂದಲಿಸಿದ್ದಾರೆ.

‘ಬಿಜೆಪಿ ಮುಖಂಡರು ಖರ್ಗೆ ಅವರನ್ನು ಟೀಕಿಸುವ ಮೂಲಕ ಇಡೀ ರಾಜ್ಯದ ದಲಿತ ಸಮುದಾಯದವರನ್ನು ಅಸಮಾಧಾನಗೊಳಿಸಿದ್ದಾರೆ. ಬಿಜೆಪಿ ಮುಖಂಡರು ಇನ್ನಾದರೂ ಸುಮ್ಮನಾಗದಿದ್ದರೆ ನಮ್ಮ ಸಂಘಟನೆ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುತ್ತದೆ’ ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.