ಗುರುವಾರ , ಏಪ್ರಿಲ್ 2, 2020
19 °C

ಯಾದಗಿರಿ | ರಸ್ತೆ ವಿಭಜಕಕ್ಕೆ ಗುದ್ದಿದ ಲಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ:ತಾಲ್ಲೂಕಿನ ಹತ್ತಿಕುಣಿ ಸೌದಾಗರ ಹೆದ್ದಾರಿಯ ತಿರುವಿನಲ್ಲಿ ಬುಧವಾರ ಬೆಳಿಗ್ಗೆ ಡಿವೈಡರ್‌ಗೆ ಲಾರಿ ಗುದ್ದಿದ ಪರಿಣಾಮ ಡಿವೈಡರ್‌ ನಾಶವಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಯಾದಗಿರಿಯಿಂದ ಸೇಡಂ ಕಡೆಗೆ ಹೊರಟಿದ್ದ ಲಾರಿ, ತಿರುವಿನಲ್ಲಿ ಚಾಲಕನನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆ ಏರಿದೆ.

ಅಪಘಾತ ತಿರುವು ಎಂದೇ ಪರಿಗಣಿಸಲಾದ ತಾಲ್ಲೂಕಿನ ಸೌದಾಗರ ತಿರುವಿನ ರಸ್ತೆಯಲ್ಲಿ ರಾಜ್ಯ ಹೆದ್ದಾರಿ ಸುರಕ್ಷತಾ ಪ್ರಾಧಿಕಾರ ₹ 80 ಲಕ್ಷ ವೆಚ್ಚದಲ್ಲಿ ಕಾಮಗಾರಿ ಕೈಗೊಂಡಿದ್ದರೂ ವಾಹನ ಅಪಘಾತಗಳು ಸಂಭವಿಸುತ್ತಿರುವುದು ಕಡಿಮೆಯಾಗಿಲ್ಲ ಎನ್ನುತ್ತಾರೆ ಸಾರ್ವಜನಿಕರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು