ಮಂಗಳವಾರ, ಸೆಪ್ಟೆಂಬರ್ 28, 2021
21 °C

ಕೆಂಭಾವಿ: ಮನೆ ಬೀಗ ಮುರಿದು ಚಿನ್ನಾಭರಣ ಕಳ್ಳತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆಂಭಾವಿ: ಹಾಡುಹಗಲೇ ಮನೆ ಯೊಂದರ ಬೀಗ ಮುರಿದುಕಳ್ಳತನ ಮಾಡಿರುವ ಘಟನೆ ಶನಿವಾರ ಸಮೀಪದ ಯಾಳಗಿ ಗ್ರಾಮದಲ್ಲಿ ನಡೆದಿದೆ.

ಗೌಡಪ್ಪಗೌಡ ಬೊಮ್ಮರೆಡ್ಡಿ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಪೆಟ್ಟಿಗೆಯಲ್ಲಿ ಇಟ್ಟಿದ್ದ ಸುಮಾರು 120 ಗ್ರಾಂ (12 ತೊಲೆ) ಚಿನ್ನವನ್ನು ಕದ್ದು ಪರಾರಿಯಾಗಿದ್ದಾರೆ.

ಮನೆ ಮಾಲೀಕ ಹಾಗೂ ಕುಟುಂಬದ ಸದಸ್ಯರು ದಿನ ನಿತ್ಯದಂತೆ ಹೊಲದಲ್ಲಿ ಕೆಲಸಕ್ಕೆಂದು ತೆರಳಿದಾಗ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ಜರುಗಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲಿಸಿದರು. ಬಳಿಕ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ತಪಾಸಣೆ ನಡೆಸಿದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೆಂಭಾವಿ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಹಿಂದೆ ಇದೇ ಏರಿಯಾದಲ್ಲಿ ಎರಡು ಮನೆಗಳಲ್ಲಿ ಕಳ್ಳತನವಾಗಿದ್ದವು. ಆದರೆ ಮನೆ ಮಾಲಿಕರು ಪೊಲೀಸ್ ಠಾಣೆಗೆ ದೂರು ನೀಡಿಲ್ಲ ಎಂದು  ಸ್ಥಳೀಯರು ತಿಳಿಸಿದ್ದಾರೆ.

ಪಿಎಸ್‍ಐ (ಅಪರಾಧ ವಿಭಾಗ) ವೆಂಕಣ್ಣ ಶಹಾಪುರಕರ್,ಸಿಬ್ಬಂದಿ ಬೀರಪ್ಪ, ಸುಭಾಸ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.