ಶನಿವಾರ, ಆಗಸ್ಟ್ 13, 2022
26 °C

ತ್ಯಾಗ, ಬಲಿದಾನದ ಫಲ: ನಿಂಗಣ್ಣ ಬಿರಾದಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುರಪುರ: ‘ದೇಶದೆಲ್ಲೆಡೆ ಸ್ವಾತಂತ್ರ್ಯ ಸಿಕ್ಕಿದ್ದರೂ ನಮ್ಮ ಭಾಗ ಕಲ್ಯಾಣ ಕರ್ನಾಟಕಕ್ಕೆ ತಡವಾಗಿ ಸಿಕ್ಕಿದೆ. ಇದರ ಹಿಂದೆ ತ್ಯಾಗ, ಬಲಿದಾನದ ಇತಿಹಾಸವಿದೆ. ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗ ಎಂಬ ಹಣೆಪಟ್ಟಿಯನ್ನು ಕಿತ್ತೊಗೆಯಲು ಪ್ರತಿಯೊಬ್ಬರು ಶ್ರಮಿಸಬೇಕು’ ಎಂದು ತಹಶೀಲ್ದಾರ್ ನಿಂಗಣ್ಣ ಬಿರಾದಾರ್ ಹೇಳಿದರು.

ಇಲ್ಲಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ಸಮಾರಂಭದಲ್ಲಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ದೇಶದ ಸಮಗ್ರತೆಯ ದೃಷ್ಟಿಯಿಂದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ‌್ ಪಟೇಲರು ಹೈದರಾಬಾದ್ ಸಂಸ್ಥಾನದ ನಿಜಾಮನನ್ನು ಮಣಿಸಿ ಈ ಭಾಗಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಟ್ಟಿದ್ದಾರೆ. ನಾವೆಲ್ಲರೂ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.

ಗ್ರೇಡ್-2 ತಹಶೀಲ್ದಾರ್ ಸೋಫಿಯಾ ಸುಲ್ತಾನ್, ಶಿರಸ್ತೇದಾರ್ ಅಶೋಕಕುಮಾರ್ ಸುರಪುರಕರ್, ಸೋಮನಾಥ ನಾಯಕ, ಕಂದಾಯ ನಿರೀಕ್ಷಕರಾದ ಗುರುಬಸಪ್ಪ, ಸಂಗಮೇಶ, ಸೋಮಶೇಖರ್, ಕೊಂಡಲನಾಯಕ, ಮುಖಂಡರಾದ ಬಸವರಾಜ ಕೊಡೇಕಲ್, ನರಸಪ್ಪ ಚಾಮನಾಳ, ಶರಣು ಕಳ್ಳಿಮನಿ, ಗುರುನಾಥ ಶೀಲವಂತ, ಪ್ರದೀಪಕುಮಾರ್, ಬಾಲರಾಜ ಚಿನ್ನಾಕಾರ್, ಅರವಿಂದ, ಭೀಮರಾಯ ಯಾದವ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು