ಶಹಾಪುರ: ‘2025-26ನೇ ಸಾಲಿನ 17 ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿ ನವೆಂಬರ್ 3 ರಿಂದ 5 ರವರೆಗೆ ನಗರದ ಸರ್ಕಾರಿ ಮಾದರಿ ಪದವಿ ಕಾಲೇಜಿನಲ್ಲಿ (ರೂಸಾ) ಹಮ್ಮಿಕೊಳ್ಳಲಾಗಿದೆ’ ಎಂದು ಡಿಡಿಪಿಐ ಚನ್ನಬಸಪ್ಪ ಮುಧೋಳ ತಿಳಿಸಿದರು.

ನಗರದ ಬಿಇಒ ಕಚೇರಿಯಲ್ಲಿ ಶನಿವಾರ ಪೂರ್ವಭಾವಿ ಸಭೆ ನಡೆಸಿದ ಅವರು, ಚೆಸ್ ಪಂದ್ಯಾವಳಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಯಿಂದ 175 ಬಾಲಕರು ಹಾಗೂ 175 ಬಾಲಕಿಯರು ಭಾಗವಹಿಸುತ್ತಿದ್ದಾರೆ. ಪಂದ್ಯಾವಳಿಯಲ್ಲಿ ಭಾಗವಹಿಸುವ ಸ್ಪರ್ದಾರ್ಥಿಗಳಿಗೆ ವಸತಿ ವ್ಯವಸ್ಥೆ, ನೋಂದಣಿಯೂ ಸರ್ಕಾರಿ ಮಾದರಿ ಪದವಿ ಕಾಲೇಜಿನಲ್ಲಿ ಮತ್ತು ಬಾಲಕಿಯರ ವಸತಿ ವ್ಯವಸ್ಥೆ ಮತ್ತು ನೋಂದಣಿ ಡಿ.ದೇವರಾಜ ಅರಸ್ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಪುರ ವಹಿಸಲಿದ್ದಾರೆ. ಅಲ್ಲದೆ ಸಂಸದರು ಹಾಗೂ ಜಿಲ್ಲೆಯ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಬಿಇಒ ವೈ.ಎಸ್. ಹರಗಿ, ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಶಾಂತಗೌಡ ಪಾಟೀಲ, ಡಯಟ್ ಉಪನ್ಯಾಸಕ ನಿಂಗಣ್ಣ ಸಿಂಪಿ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿ ಶರಣಪ್ಪ ಪಾಟೀಲ, ಹಣಮಂತರಾಯ ಸೋಮಾಪುರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.