ಸೈದಾಪುರ: ‘ರಾಜ್ಯದಲ್ಲಿ ಉಪ್ಪಾರ ಸಮಾಜಕ್ಕೆ ಸಮರ್ಪಕ ರಾಜಕೀಯ ಪ್ರತಿನಿಧಿತ್ವ ದೊರಕಬೇಕಾದರೆ ಉಪ್ಪಾರ ಸಮಾಜದ ಏಕೈಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು’ ಎಂದು ಕರ್ನಾಟಕ ರಾಜ್ಯ ಉಪ್ಪಾರ ಸಂಘದ ಪ್ರಧಾನ ಕಾರ್ಯದರ್ಶಿ ಬನ್ನಪ್ಪ ಹುಲಿಬೆಟ್ಟ ಸೌರಾಷ್ಟ್ರಹಳ್ಳಿ ಒತ್ತಾಯಿಸಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ. ಪುಟ್ಟರಂಗಶೆಟ್ಟಿ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿದ್ದು, ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

‘ರಾಜ್ಯದಲ್ಲಿ ಸುಮಾರು 30 ರಿಂದ 40 ಲಕ್ಷ ಉಪ್ಪಾರ ಸಮಾಜದ ಜನಸಂಖ್ಯೆ ಇದ್ದು, ಸಮಾಜಕ್ಕೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ’ ಎಂದು ಹೇಳಿದರು.

‘ಉಪ್ಪಾರ ಸಮಾಜವು ಕಾಂಗ್ರೆಸ್ ಪಕ್ಷಕ್ಕೆ ಸದಾ ಬೆಂಬಲ ನೀಡುತ್ತಾ ಬಂದಿದ್ದು, ಇದೀಗ ಸಮಾಜದ ಆಶಯಕ್ಕೆ ಸ್ಪಂದಿಸಿ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮಾಜಕ್ಕೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ವಲಯ ಅಧ್ಯಕ್ಷ ಶಾಂತಪ್ಪ ಉಪ್ಪಾರ, ಗೌರವಾಧ್ಯಕ್ಷ ರಮೇಶ್ ಹಿಂದಪುರ, ಉಪಾಧ್ಯಕ್ಷ ರಾಚಪ್ಪ ಬೆಳಗುಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-30-127279619

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.