ಸೈದಾಪುರ: ಕಡೇಚೂರು ಗ್ರಾಮದ ಹೊರಭಾಗದಲ್ಲಿ 150ಎ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮದುವೆ ಆಹ್ವಾನ ಪತ್ರಿಕೆ ಹಂಚಲು ತೆರಳಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಗೌಡಗೇರಾ ಗ್ರಾಮದ ಶಿವರಾಜ್ (60) ಹಾಗೂ ಬಸವಲಿಂಗ (28) ಎಂದು ಗುರುತಿಸಲಾಗಿದೆ. ಇವರು ತಮ್ಮ ಸಂಬಂಧಿಕರ ಮದುವೆ ನಿಮಿತ್ತ ಆಹ್ವಾನ ಪತ್ರಿಕೆಗಳನ್ನು ಹಂಚಲು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ, ಕಡೇಚೂರು ಗ್ರಾಮದ ಹೊರವಲಯದಲ್ಲಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.

ಡಿಕ್ಕಿಯ ತೀವ್ರತೆಗೆ ಇಬ್ಬರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ನಂತರ ಟ್ರ್ಯಾಕ್ಟರ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಸೈದಾಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ದುರ್ಘಟನೆಯಿಂದ ಗೌಡಗೇರಾ ಗ್ರಾಮದಲ್ಲಿ ಶೋಕದ ವಾತಾವರಣ ಮದುವೆ ಮನೆಮಾಡಬೇಕಿದ್ದ ಕುಟುಂಬದಲ್ಲಿ ದುಃಖ ಆವರಿಸಿದೆ.

ಸ್ಥಳೀಯರು ಅಕ್ರಮ ಮರಳು ಸಾಗಾಟ ಹಾಗೂ ಅಜಾಗರೂಕ ವಾಹನ ಚಾಲನೆಯೇ ಇಂತಹ ದುರಂತಗಳಿಗೆ ಕಾರಣವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಟ್ರ್ಯಾಕ್ಟರ್ ಚಾಲಕನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-30-346181122

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.