ಸೈದಾಪುರ: ‘ಸ್ಯಾನಿಟರಿ ನ್ಯಾಪಕಿನ್ ಬಳಕೆ ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಲು ಸಹಾಯಕವಾಗುತ್ತದೆ’ ಎಂದು ಡಾ.ಅಶೋಕರಡ್ಡಿ ಹೇಳಿದರು.

ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಶುಚಿ ಉಚಿತ ಸ್ಯಾನಿಟರಿ ನ್ಯಾಪ್ಕಿನ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

‘ಹದಿಹರೆಯದ ಹೆಣ್ಣು ಮಕ್ಕಳಿಗೆ ಶುಚಿ ಯೋಜನೆಯಿಂದ ಅನುಕೂಲವಾಗಲಿದೆ. ಮಹಿಳೆಯರು ಮಾಸಿಕ ಋತು ಚಕ್ರದ ಸಮಯದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ’ ಎಂದು ಹೇಳಿದರು.

‘ಈಗಾಗಲೇ ಪಟ್ಟಣದ ಶಾಲಾ–ಕಾಲೇಜುಗಳಲ್ಲಿಈ ಬಗ್ಗೆ ಮಹಿಳಾ ಆರೋಗ್ಯ ತಜ್ಞರಿಂದ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗಿದೆ. ಸಂಬಂಧಪಟ್ಟ ಸಂಸ್ಥೆಯ ಮುಖ್ಯಸ್ಥರು ಇವುಗಳನ್ನು ವಿತರಣೆ ಮಾಡಿ ಮಾಹಿತಿ ನೀಡಬೇಕು’ ಎಂದು ಸಲಹೆ ನೀಡಿದರು.

ಇದೇ ವೇಳೆ ವಿವಿಧ ಶಾಲಾ ಕಾಲೇಜುಗಳಿಗೆ ಸ್ಯಾನಿಟರಿ ನ್ಯಾಪಕಿನ್ ವಿತರಣೆ ಮಾಡಲಾಯಿತು. ಡಾ.ಅಶ್ವಿನಿ, ಸೈದಾಪುರ ಮಲ್ಹಾರ ಕಾರಡ್ಡಿ ಮತ್ತು ಬಸವಂತ್ರಾಯ ಸಿದ್ದಪ್ಪ ಸ್ಮಾರಕ ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಿ.ಎಂ.ಗುರುಪ್ರಸಾದ, ಕರಬಸಯ್ಯ ದಂಡಿಗಿಮಠ, ಆರ್ಕೆಎಸ್ಕೆ ಕೌನ್ಸ್ಲರ್ ಶಿವಶಂಕರರಡ್ಡಿ, ಸಮುದಾಯ ಆರೋಗ್ಯ ಕೇಂದ್ರದ ಉಸ್ಮಾನ, ಕಸ್ತೂರಿ, ಶೀಭಾ, ಪ್ರೀತಿ, ಚಂದ್ರಶೇಖರ ಸೇರಿದಂತೆ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260319-30-1527401954

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.