ಬುಧವಾರ, ಜುಲೈ 28, 2021
29 °C

ಸೈದಾಪುರ: ರಥದಲ್ಲಿ ಕೂರಿಸಿ ನಿವೃತ್ತ ಮುಖ್ಯ ಶಿಕ್ಷಕರ ಮೆರವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೈದಾಪುರ: ಸಮೀಪದ ನೀಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಶರಣಪ್ಪ ನಡುವಿನಕೇರಿ ಅವರನ್ನು ಗ್ರಾಮಸ್ಥರು ರಥದಲ್ಲಿ ಕೂರಿಸಿ ಮೆರವಣಿಗೆ ಮಾಡಿದರು.

ಗ್ರಾಮದಲ್ಲಿ 17 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾದ ಮುಖ್ಯ ಶಿಕ್ಷಕ ಶರಣಪ್ಪ ದಂಪತಿಗೆ ಗ್ರಾಮದ ಹಿರಿಯರು, ಹಳೆ ವಿದ್ಯಾರ್ಥಿಗಳು, ಯುವಕರು ಸೇರಿ ಶಾಲು ಹೊದಿಸಿ, ಫಲಪುಷ್ಪ ನೀಡಿ, ಭವ್ಯ ರಥದಲ್ಲಿ ಕೂರಿಸಿ ವಾದ್ಯ ವೃಂದಗಳೊಂದಿಗೆ ಮೆರವಣಿಗೆ ನಡೆಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶರಣಪ್ಪ, ‘ನಾನು ಮುಖ್ಯಶಿಕ್ಷಕನಾಗಿ ಸೇವೆಗೆ ನಿವೃತ್ತಿ ಹೊಂದಿದ್ದೇನೆ ಹೊರತು, ಗ್ರಾಮದ ಮಕ್ಕಳ ಮನಸ್ಸಿನಿಂದ ನಿವೃತ್ತಿಯಾಗಲು ಕನಸಿನಲ್ಲೂ ಬಯಸುವುದಿಲ್ಲ’ ಎಂದರು.

‌ಈ ಸಂದರ್ಭದಲ್ಲಿ ಎಸ್‍ಡಿಎಂಸಿ ಮಾಜಿ ಅಧ್ಯಕ್ಷ, ಸದಸ್ಯರು, ಶಿಕ್ಷಕರು, ಗ್ರಾಮದ ಹಿರಿಯರು, ಯುವ ಮುಖಂಡರು, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.