ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಏಕತೆಯ ಬೆಸುಗೆ ಹಾಕಿದ ಸಂತ ಶಂಕರಾಚಾರ್ಯರು’

Published 12 ಮೇ 2024, 16:09 IST
Last Updated 12 ಮೇ 2024, 16:09 IST
ಅಕ್ಷರ ಗಾತ್ರ

ಯಾದಗಿರಿ: ಶಂಕರಚಾರ್ಯರ ಸಿದ್ದಾಂತಗಳಲ್ಲಿ ಸಮಾನ ಮನೋಭಾವ, ಸಮಾನ ದೃಷ್ಟಿಕೋನ ಹಾಗೂ ನಾವೆಲ್ಲರೂ ಒಂದೇ ಎಂಬ ಭಾವನೆಯ ಸಂದೇಶಗಳಿದ್ದು, ದೇಶದ ಏಕತೆಯ ಬೆಸುಗೆ ಹಾಕಿದ ಸಂತರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅಭಿಪ್ರಾಯಪಟ್ಟರು.

ಲೋಕಸಭಾ ಚುನಾವಣೆ ನಿಮಿತ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ಸರಳ ಹಾಗೂ ಸಾಂಕೇತಿಕವಾಗಿ ಶಂಕರಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜಯಂತಿ ಆಚರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಶಂಕರ ಸೇವಾ ಸಮಿತಿಯ ಸಂಚಾಲಕ ರವೀಂದ್ರ ಕುಲಕರ್ಣಿ, ಸಮಿತಿ ತಾಲ್ಲೂಕು ಅಧ್ಯಕ್ಷ ಗೋರಖನಾಥ ಜೋಶಿ,ದತ್ತಾತ್ರೇಯ ಕುಲಕರ್ಣಿ, ಅನುಸೂಯ ಜೋಶಿ, ಶ್ರೀದೇವಿ ಸೇರಿದಂತೆ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್, ಉಪನ್ಯಾಸಕ ಗುರುಪ್ರಸಾದ್‌ ವೈದ್ಯ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT