ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿನಿ ಅಂಗನವಾಡಿ ಮೇಲ್ದರ್ಜೆಗೆ ಏರಿಸಲು ಆಗ್ರಹ

Last Updated 8 ಮಾರ್ಚ್ 2018, 6:58 IST
ಅಕ್ಷರ ಗಾತ್ರ

ಶಿವಮೊಗ್ಗ: ಮಿನಿ ಅಂಗನವಾಡಿ ಕೇಂದ್ರಗಳನ್ನು ಅಂಗನವಾಡಿ ಕೇಂದ್ರಗಳನ್ನಾಗಿ ಮೇಲ್ದರ್ಜೆಗೆ ಏರಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ಜಿಲ್ಲಾ ಶಾಖೆಯ ಕಾರ್ಯಕರ್ತೆಯರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸರ್ಕಾರದ ಮಹತ್ವದ ಯೋಜನೆಗಳು ಪರಿಪೂರ್ಣವಾಗಲು ತಕ್ಷಣವೇ ಸಹಾಯಕಿಯರನ್ನು ನೇಮಕ ಮಾಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಒತ್ತಾಯಿಸಿದರು.

2011ರಿಂದ ನಿವೃತ್ತಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ₹ 3 ಸಾವಿರ ಪಿಂಚಣಿನೀಡಬೇಕು. ಸಾರಿಗೆ ಹಾಗೂ ತುಟ್ಟಿ ಭತ್ಯೆ ಹೆಚ್ಚಿಸಿ, ಅದನ್ನು ನಗರ ಪ್ರದೇಶದವರೆಗೂ ವಿಸ್ತರಿಸಬೇಕು. ಇಎಸ್ಐ, ಭವಿಷ್ಯ ನಿಧಿ ಜಾರಿಗೊಳಿಸಬೇಕು. ಸೇವಾ ಹಿರಿತನದ ಆಧಾರದ ಮೇಲೆ ಗೌರವ ಧನಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.

ಎಐಟಿಯುಸಿ ಜಿಲ್ಲಾ ಅಧ್ಯಕ್ಷೆ ಸುಶೀಲಾಬಾಯಿ, ರವೀಂದ್ರ ಸಾಗರ್, ಕೆ.ಸಿ.ವಿಶಾಲ, ವೇದಾವತಿ, ಜೆ.ಕೆ.ಸುಲೋಚನ, ಗಾಯತ್ರಿ, ತಾರಾ, ಲೀಲಾವತಿ, ಕೋಮಲಾಕ್ಷಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT