ಶನಿವಾರ, ಜನವರಿ 25, 2020
16 °C
ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಕೃಷ್ಣ ಕರೆ

‘ಪರಿಸರ ಉಳಿಸಿ, ನೆಲ-ಜಲ ಸಂರಕ್ಷಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಕೃಷಿ, ಪರಿಸರವನ್ನು ಅರ್ಥ ಮಾಡಿಕೊಂಡು ಅದರ ಉಳಿವಿಗಾಗಿ ಎಲ್ಲರೂ ಕೈಜೋಡಿಸಿದಾಗ ಮಾತ್ರ ಮುಂದಿನ ದಿನಗಳಲ್ಲಿ ನೆಲ- ಜಲವನ್ನು ಸಂರಕ್ಷಣೆ ಮಾಡಲು ಸಾಧ್ಯ ಎಂದು ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಕೃಷ್ಣ ಹೇಳಿದರು.‌

ಕವಡಿಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯ ಬೆಂಗಳೂರು ಹಾಗೂ ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ ಕವಡಿಮಟ್ಟಿ  ವತಿಯಿಂದ ಶುಕ್ರವಾರ ಸುರಪುರ ತಾಲ್ಲೂಕಿನ ಆಯ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳಿಗೆ ಆಯೋಜಿಸಿದ್ದ ‘ಕೃಷಿ ಪರಿಸರ ಮತ್ತು ಜೀವನೋಪಾಯಗಳು’ ಬಗ್ಗೆ ಒಂದು ದಿನದ ತರಬೇತಿಯಲ್ಲಿ ಅವರು ಮಾತನಾಡಿದರು.

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕಿ ಡಾ.ಧನ್ಯಾ ಮಾತನಾಡಿ, ಕೃಷಿಯಲ್ಲಿ ಕೇವಲ ಹಣ ಗಳಿಸುವುದು ಮುಖ್ಯವಲ್ಲ. ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು.

ಕವಡಿಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಅಮರೇಶ್ ವೈ.ಎಸ್. ಮಾತನಾಡಿ, ಕೃಷಿಯಲ್ಲಿ ಜೈವಿಕ ಗೊಬ್ಬರಗಳನ್ನು ಬಳಕೆ ಮಾಡುವುದರಿಂದ ರಾಸಾಯನಿಕ ಗೊಬ್ಬರ ಬಳಕೆ ಮಾಡುವುದರಿಂದ ಉಳಿತಾಯ ಮಾಡಬಹದು ಎಂದರು.

ಡಾ.ಉಮೇಶ ಬಾರಿಕರ ಮಾತನಾಡಿ, ಬೆಳೆಗಳಿಗೆ ಪೋಷಕಾಂಶಗಳನ್ನು ಬಳಸುವ ಮುನ್ನ ಮಣ್ಣಿನ ಪರೀಕ್ಷೆ ಮಾಡಿಸಿ ಅದರ ಫಲಿತಾಂಶ ಆಧರಿಸಿ ಬೆಳೆಗಳಿಗೆ ಪೋಷಕಾಂಶಗಳನ್ನು ಬಳಸುವುದರಿಂದ ರೈತರು ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.

ಡಾ.ಮಹೇಶ ಕೃಷಿ ಪರಿಸರದ ಸುಸ್ಥಿರದಲ್ಲಿ ಜಾನುವಾರುಗಳ ಮಹತ್ವ ಕುರಿತು ಮಾಹಿತಿ ನೀಡಿದರು.

ವಿಜ್ಞಾನಿಗಳಾದ ಡಾ.ಸತೀಶಕುಮಾರ ಕಾಳೆ, ಡಾ.ಮಲ್ಲಿಕಾರ್ಜುನ ಕೆಂಗನಾಳ, ಡಾ.ಶಾಂತವೀರಯ್ಯ, ರಾಘವೇಂದ್ರ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು