ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಸಿ, ಟಿಎಸ್‌ಪಿ ಅನುದಾನ ಅನ್ಯ ಕಾರ್ಯಕ್ಕೆ: ಆಕ್ರೋಶ

Published 6 ಅಕ್ಟೋಬರ್ 2023, 16:01 IST
Last Updated 6 ಅಕ್ಟೋಬರ್ 2023, 16:01 IST
ಅಕ್ಷರ ಗಾತ್ರ

ಯಾದಗಿರಿ: ‘ರಾಜ್ಯ ಸರ್ಕಾರ ಎಸ್‌ಸಿ, ಟಿಎಸ್‌ಪಿ ಯೋಜನೆ ಅನುದಾನವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಬಾರದು’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮ ಘರ್ಜನೆ) ರಾಜ್ಯ ಸಮಿತಿ ಸಂಚಾಲಕ ನಾಗಣ್ಣ ಕಲ್ಲದೇವನಹಳ್ಳಿ ಹಾಗೂ ರಾಜ್ಯ ಸಮಿತಿ ಸದಸ್ಯ ದೊಡ್ಡಪ್ಪ ಪೂಜಾರಿ ಹುಂಡೇಕಲ್ ಆಗ್ರಹಿಸಿದ್ದಾರೆ.

ಈ ಕುರಿತು ಜಂಟಿ ಹೇಳಿಕೆ ನೀಡಿರುವ ಅವರು, ‘ರಾಜ್ಯ ಸರ್ಕಾರ ತನ್ನ ಉಚಿತ ಯೋಜನೆಗಳ ಜಾರಿ ಮಾಡಿ ರಾಜ್ಯದ ಹಣಕಾಸು ಪರಿಸ್ಥಿತಿ ಸರಿದೂಗಿಸಲು ದಲಿತರ ಅನುದಾನವನ್ನು ವರ್ಗಾಯಿಸುತ್ತಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಚುನಾವಣೆಗೂ ಮುನ್ನ ಘೋಷಣೆ ಮಾಡಿದ ಯೋಜನೆಗಳಿಗೆ ಬೇರೆ ಮೂಲಗಳಿಂದ ಸಂಪನ್ಮೂಲ ಕ್ರೋಢಿಕರಣ ಮಾಡಿಕೊಳ್ಳಿ. ಆದರೆ, ದಲಿತರ ಪಾಲಿನ ಅನುದಾನಕ್ಕೆ ಕೈಹಾಕಿರುವುದು ಸೋಜಿಗದ ಸಂಗತಿ, ಅಧಿಕಾರ ಉಳಿಸಿಕೊಳ್ಳಲು ದಲಿತರ ಅನುದಾನವೇ ಬೇಕೇ? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರ ರಚನೆಗೆ ದಲಿತರ ಮತಬೇಕು. ಈಗ ಉಚಿತ ಭಾಗ್ಯಗಳನ್ನು ಎಲ್ಲರಿಗೂ ಕೊಟ್ಟು ದಿವಾಳಿ ಏಳುವಾಗ ಸರ್ಕಾರ ಉಳಿಸಿಕೊಳ್ಳಲು ದಲಿತರ ಹಣವೇ ಬೇಕೇ ಎಂದು ಪ್ರಶ್ನಿಸಿದ್ದಾರೆ.

‘ಯಾವುದೇ ಕಾರಣಕ್ಕೂ ದಲಿತರಿಗೆ ಮೀಸಲಿಟ್ಟ ಹಣವನ್ನು ಉಪಯೋಗಿಸಬಾರದು ಎಂದು ಒತ್ತಾಯಿಸಿದ ಅವರು, ಒಂದು ವೇಳೆ ಅನುದಾನ ದುರ್ಬಳಕೆ ಮಾಡಿಕೊಂಡಲ್ಲಿ ರಾಜ್ಯಾದ್ಯಂತ  ಹೋರಾಟ ರೂಪಿಸಬೇಕಾಗುತ್ತದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT