ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾರಾಯಣಪುರ | ಶಾಲಾ ದಾಖಲಾತಿ ಆಂದೋಲನ: ಜಾಗೃತಿ ಜಾಥಾ

Published 30 ಮೇ 2024, 15:53 IST
Last Updated 30 ಮೇ 2024, 15:53 IST
ಅಕ್ಷರ ಗಾತ್ರ

ನಾರಾಯಣಪುರ: ಸಮೀಪದ ಅಮ್ಮಾಪುರ ಎಸ್‌.ಕೆ ಗ್ರಾಮದಲ್ಲಿ ಇಲ್ಲಿನ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರಭಾತಪೇರಿ ನಡೆಸಿ ಜಾಗೃತಿ ಮೂಡಿಸಿದರು.

ಈ ವೇಳೆ ಮುಖ್ಯಶಿಕ್ಷಕ ಅಚ್ಚಪ್ಪಗೌಡ ಮಾತನಾಡಿ, ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ಚಟುವಟಿಕೆ ಆರಂಭವಾಗಿದ್ದು, ಪಾಲಕರು ಮಕ್ಕಳನ್ನು ತಪ್ಪದೆ ಶಾಲೆಗೆ ಕಳುಹಿಸಬೇಕು ಎಂದು ಹೇಳಿದರು.

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಶೂ, ಸಾಕ್ಸ್, ಮಧ್ಯಾಹ್ನದ ಬಿಸಿಯೂಟ, ಹಾಲು ನೀಡಲಾಗುತ್ತಿದೆ. ಸರ್ಕಾರಿ ಶಾಲೆಯ ಈ ಎಲ್ಲಾ ಸೌಲಭ್ಯಗಳ ಸದುಪಯೋಗ ಪಡೆದು ವಿದ್ಯಾರ್ಥಿಗಳು ನಿತ್ಯವು ಶಾಲೆಗೆ ಬರಬೇಕು ಎಂದು ಹೇಳಿದರು.

ಎಸ್‌ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರು, ಅಡುಗೆ ಸಿಬ್ಬಂದಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಘೋಷಣೆ ಕೂಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರಭಾತಪೇರಿ ಗಮನಸೆಳೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT