ಸರ್ಕಾರಿ ಶಾಲೆಯ ಶಿಕ್ಷಕರು ಪ್ರತಿಭಾವಂತರಿದ್ದಾರೆ. ಇಚ್ಛಾಶಕ್ತಿಯ ಕೊರತೆಯಿಂದ ಸರಿಯಾಗಿ ಪಾಠ ಮಾಡುತ್ತಿಲ್ಲ. ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಶಿಕ್ಷಕರು ಕಡ್ಡಾಯವಾಗಿ ಶಾಲೆಗೆ ತೆರಳಬೇಕು.
ಶರಣಬಸಪ್ಪ ದರ್ಶನಾಪುರ, ಸಚಿವ
ನಿಗದಿಪಡಿಸಿದ ಅವಧಿಯಲ್ಲಿ ಶಿಕ್ಷಕರು ಕರ್ತವ್ಯದ ಮೇಲೆ ಇರದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಶಿಕ್ಷಕರು ಶಾಲೆಗೆ ಬರುತ್ತಾರೆ ಇಲ್ಲವೋ ಎಂಬುದನ್ನು ಪರಿಶೀಲಿಸಲು ಶಿಕ್ಷಣ ಇಲಾಖೆಯ ಸಿಬ್ಬಂದಿ ಜತೆಯಲ್ಲಿ ಮಿಂಚಿನ ಸಂಚಾರ ಹಮ್ಮಿಕೊಂಡಿದೆ.