‘ಕೊಠಡಿ ನಿರ್ಮಾಣಕ್ಕೆ ಕ್ರಿಯಾ ಯೋಜನೆ’

7
ಕೊಠಡಿ ಸಮಸ್ಯೆ: ದೂರವಾಣಿ ಮೂಲಕ ಅಹವಾಲು ಸ್ವೀಕಾರ

‘ಕೊಠಡಿ ನಿರ್ಮಾಣಕ್ಕೆ ಕ್ರಿಯಾ ಯೋಜನೆ’

Published:
Updated:
Deccan Herald

ಯಾದಗಿರಿ: ‘ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬೇಕಾಗುವ ಹೆಚ್ಚುವರಿ ಕೋಣೆಗಳ ನಿರ್ಮಾಣಕ್ಕೆ ಕ್ರಿಯಾ ಯೋಜನೆ ರೂಪಿಸಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಕೊಠಡಿ ಸಮಸ್ಯೆ ಬಗ್ಗೆ ಬುಧವಾರ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಾರ್ವಜನಿಕರಿಂದ ದೂರ ವಾಣಿ ಮೂಲಕ ಅಹವಾಲು ಸ್ವೀಕರಿಸಿ ಮಾತನಾಡಿದರು.

‘ಸಾರ್ವಜನಿಕರಿಂದ ಬಂದ ಅಹವಾಲುಗಳ ಅನುಸಾರ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಬೇಕು. ಶಿಥಿಲಾವಸ್ಥೆಯಲ್ಲಿರುವ ಕೋಣೆಗಳನ್ನು ನೆಲಸಮಗೊಳಿಸಿ, ಹೊಸ ಕೋಣೆಗಳನ್ನು ನಿರ್ಮಿಸಲಾಗುವುದು’ ಎಂದು ಹೇಳಿದರು.

‘ಸಾರ್ವಜನಿಕರಿಂದ ಒಟ್ಟು 63 ಕರೆಗಳು ಸ್ವೀಕೃತವಾಗಿದ್ದು, ಅವರು ತಮ್ಮ ಗ್ರಾಮಗಳ ಶಾಲೆಗಳ ಸಮಸ್ಯೆಗಳನ್ನು ಹೇಳಿಕೊಂಡರು. ಕೆಲವರು ಶಾಲೆಗಳಿಗೆ ಶೌಚಾಲಯ, ಆವರಣ ಗೋಡೆ, ನೀರಿನ ವ್ಯವಸ್ಥೆ ಮಾಡಲು ಮತ್ತು ಶಿಕ್ಷಕರ ಕೊರತೆ ಬಗ್ಗೆ ಮನವಿ ಮಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ್ ಬಿರಾದಾರ, ಎಚ್‌ಕೆಆರ್‌ಡಿಬಿ ಶಾಖೆಯ ಯೋಜನಾ ಸಮನ್ವಯಾಧಿಕಾರಿ ವಿಶ್ವನಾಥ ಚಲಗೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !