ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಕೌಟ್ಸ್, ಗೈಡ್ಸ್ ಸಂಸ್ಥಾಪನಾ ದಿನ: ಧ್ವಜ ಚೀಟಿ ಬಿಡುಗಡೆ

Last Updated 8 ನವೆಂಬರ್ 2019, 15:29 IST
ಅಕ್ಷರ ಗಾತ್ರ

ಯಾದಗಿರಿ:‘ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕಾರ್ಯ ಕಾಲೇಜು ಹಂತದಲ್ಲಿಯೂ ಬೆಳೆಯಬೇಕೆಂದು’ ಸಂಸ್ಥೆಯ ಜಿಲ್ಲಾಧ್ಯಕ್ಷರೂ ಆದ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸಲಹೆ ನೀಡಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸ್ಕೌಟ್ಸ್ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆಯ ನಿಮಿತ್ತ ಧ್ವಜ ಚೀಟಿ ಬಿಡುಗಡೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಸದ್ಯ ಜಿಲ್ಲೆಯಲ್ಲಿ ಶಾಲಾ ಹಂತದಲ್ಲಿ ಸ್ಕೌಟ್ಸ್ ಕಾರ್ಯ ಅತ್ಯುತ್ತಮವಾಗಿದ್ದು ಇದು ಕಾಲೇಜು ಹಂತಕ್ಕೆ ವಿಸ್ತರಣೆಗೊಳ್ಳಬೇಕು’ ಎಂದು ತಿಳಿಸಿದರು.

‘ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಹಾಗೂ ದೇಶದ ಕುರಿತಾದ ಕರ್ತವ್ಯಗಳನ್ನು ತಿಳಿಹೇಳುವ ಮತ್ತು ಶಿಸ್ತು ಮೂಡಿಸಿ ಸೇವಾ ಮನೋಭಾವನೆ ಬೆಳೆಸುವ ಸಂಸ್ಥೆಯ ಕಾರ್ಯ ಮಾದರಿಯಾಗಿದೆ’ ಎಂದು ಹೇಳಿದರು.

ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಸ್ಕೌಟ್ಸ್ ಜಿಲ್ಲಾ ಆಯುಕ್ತ ಪ್ರೊ.ಸಿ.ಎಂ.ಪಟ್ಟೇದಾರ, ಗೈಡ್ಸ್ ಜಿಲ್ಲಾ ಆಯುಕ್ತೆ ನಾಗರತ್ನಾ ಅನಪೂರ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಅಳ್ಳಳ್ಳಿ, ಜಿಲ್ಲಾ ಸಂಘಟಕಿ ನಾಗರತ್ನಾ ಪಾಟೀಲ ಸೇರಿದಂತೆ ಅಲ್ಲಿಪುರ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT