ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗುರುವಿನ ಮಾರ್ಗದರ್ಶನ ಅಗತ್ಯ’

Last Updated 13 ನವೆಂಬರ್ 2019, 11:57 IST
ಅಕ್ಷರ ಗಾತ್ರ

ಕೆಂಭಾವಿ: ‘ಮನುಷ್ಯನ ಜೀವನ ಸಾರ್ಥಕವಾಗಬೇಕಾದರೆ ಗುರುವಿನ ಸಾಕ್ಷಾತ್ಕಾರವಾಗಬೇಕು’ ಎಂದು ಶರಣ ಬಸನಗೌಡ ಬಿರಾದಾರ ಅಭಿಪ್ರಾಯಪಟ್ಟರು.

ಶ್ರೀಗುರುಕಾಂತೇಶ್ವರ ಜನ ಕಲ್ಯಾಣ ಪ್ರತಿಷ್ಠಾನ, ಪಟ್ಟಣದ ಹಿರೇಮಠ ಸಂಸ್ಥಾನ ಮಠದಲ್ಲಿ ಮಂಗಳವಾರ ಆಯೋಜಿಸಿದ್ದ ಮಾಸಿಕ ಶಿವಾನುಭವ ಚಿಂತನ-ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎನ್ನುವ ದಾಸರ ವಾಣಿಯಂತೆ ಬಾಲ್ಯ, ಯೌವನ, ಮುಪ್ಪು ಈ ಮೂರು ಹಂತಗಳನ್ನು ದಾಟಬೇಕು. ಅದಕ್ಕೆ ಗುರುವಿನ ಮಾರ್ಗದರ್ಶನ ಬೇಕು ಎಂದು ಹೇಳಿದರು.

ಷಡಕ್ಷರಯ್ಯ ಸ್ವಾಮಿ ಮುದ್ದೆಬಿಹಾಳ ಮಾತನಾಡಿ,‘ಶ್ರೀಮಠದಿಂದ ಜರಗುವ ಈ ಕಾರ್ಯಕ್ರಮ ಶ್ಲಾಘನೀಯವಾದದ್ದು, ಮುಂಬರುವ ದಿನಗಳಲ್ಲಿ ಮುದ್ದೆಬಿಹಾಳದಲ್ಲಿ ಶಿವಾನುಭವ ಚಿಂತನ ಮಂಥನ ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದು ಹೇಳಿದರು.

ಪೀಠಾಧಿಪತಿ ಚನ್ನಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಡಾ.ಯಂಕನಗೌಡ ಪಾಟೀಲ ನಿರೂಪಿಸಿದರು.

ಸೋಮನಾಥ ಯಾಳಗಿ ಹಾಗೂ ಕಾಳಪ್ಪ ವಿಶ್ವಕರ್ಮ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT