ಬುಧವಾರ, ಸೆಪ್ಟೆಂಬರ್ 22, 2021
29 °C

ಸೋಂಕು ಲಕ್ಷಣಗಳಿದ್ದವರಿಗೆ ಪ್ರತ್ಯೇಕ ಕೋಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಹಾಪುರ/ವಡಗೇರಾ: ಪ್ರಸಕ್ತ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರ ನಡೆಯಲಿದ್ದು, ಆಯಾ ಪರೀಕ್ಷೆ ಕೋಣೆಗಳನ್ನು ಸ್ವಚ್ಛಗೊಳಿಸುವುದರ ಜತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎರಡು ತಾಲ್ಲೂಕು ಸೇರಿ 29 ಕೇಂದ್ರಗಳಿದ್ದು, 5,610 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಗೌಡ ಪಾಟೀಲ ತಿಳಿಸಿದರು.

ನಗರದ ವಿವಿಧ ಪರೀಕ್ಷೆ ಕೇಂದ್ರಕ್ಕೆ ಭೇಟಿ ನೀಡಿ ನಂತರ ಮಾತನಾಡಿದ ಅವರು, ಸಮವಸ್ತ್ರ, ಮಾಸ್ಕ್, ಸುರಕ್ಷಿತ ಅಂತರ, ಥರ್ಮಿಲ್ ಸ್ಕ್ಯಾನ್, ಸ್ಯಾನಿಟೈಜರ್ ಎಲ್ಲವನ್ನು ಪ್ರತಿ ವಿದ್ಯಾರ್ಥಿಯನ್ನು ತಪಾಸಣೆ ಮಾಡಲಾಗುವುದು. ರೋಗ ಲಕ್ಷ್ಮಣವಿದ್ದರೆ ಮುಂಚಿತವಾಗಿ ತಿಳಿಸಿ ಪ್ರತ್ಯೇಕ ಕೋಣೆಯಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಇದೆ. ಪ್ರತಿ ವಿದ್ಯಾರ್ಥಿಯು ನೀಲಿ/ಕಪ್ಪು ಬಾಲ್ ಪಾಯಿಂಟ್ ಪೆನ್ ತರುವುದು. ಮನೆಯಿಂದ ಬಿಸಿ ನೀರನ್ನು ತರುವುದು ಸೇರಿದಂತೆ ಎಲ್ಲಾ ನಿಯಮಗಳನ್ನು ಆಯಾ ಶಾಲೆಯ ಮುಖ್ಯಗುರುಗಳು ಈಗಾಗಲೇ ವಿದ್ಯಾರ್ಥಿಗಳಿಗೆ ಸೂಚನೆ ನೀಡಿದ್ದಾರೆ ಎಂದರು.

‘ಧೈರ್ಯ ಮತ್ತು ಆತ್ಮ ವಿಶ್ವಾಸ ನಿಮ್ಮ ಬದುಕನ್ನು ರೂಪಿಸುವ ನಿಮ್ಮಲ್ಲಿರುವ ಎರಡು ಶಕ್ತಿಗಳು. ನಿಮ್ಮ ಒಳಿತಿಗಾಗಿ ಶಿಕ್ಷಣ ಇಲಾಖೆ ಸದಾ ಇರುತ್ತದೆ’ ಎಂದು ಅವರು ವಿದ್ಯಾರ್ಥಿಗಳಿಗೆ ಅಭಯ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು