ಶಹಾಪುರ (ಯಾದಗಿರಿ ಜಿಲ್ಲೆ) : ತಾಲ್ಲೂಕಿನ ಹೊತಪೇಟ ಗ್ರಾಮದ ಬಳಿ ಇರುವ ನವೋದಯ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿ 75 ಜನರಿಗೆ ಗುರುವಾರ ಕೋವಿಡ್ ದೃಢಪಟ್ಟಿದೆ.

'ಶೀತಗಾಳಿಯ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿದ್ದು, ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಂಡಿವೆ. ಪರೀಕ್ಷೆ ಮಾಡಿಸಿದಾಗ ಕೋವಿಡ್ ದೃಢಪಟ್ಟಿದೆ. ಅಲ್ಲದೇ ಇಲ್ಲಿ ಪೂರ್ಣಕಾಲಿಕ ಸ್ಟಾಫ್ ನರ್ಸ್ ಇಲ್ಲದ ಕಾರಣ ವಿದ್ಯಾರ್ಥಿಗಳು ಚಿಕ್ಕಪುಟ್ಟ ಆರೋಗ್ಯದ ಸಮಸ್ಯೆಯಿಂದ ಪರದಾಡುವಂತೆ ಆಗಿದೆ' ಎಂದು ಪಾಲಕರೊಬ್ಬರು ತಿಳಿಸಿದರು.

'ವಿದ್ಯಾಲಯದ 363 ಮಕ್ಕಳಿಗೆ ತಪಾಸಣೆ ಮಾಡಲಾಗಿದೆ. ಮಕ್ಕಳಿಗೆ ಪ್ರತ್ಯೇಕ ವಾಸ ಮಾಡಲು ವ್ಯವಸ್ಥೆ ಮಾಡಲಾಗಿದೆ. ಪಾಲಕರು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ' ಎಂದು ವೈದ್ಯೆ ಡಾ.ಕಾವ್ಯಾಶ್ರೀ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಭೇಟಿ:ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್, ನವೋದಯ ಮಹಾ ವಿದ್ಯಾಲಯಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಮಕ್ಕಳಿಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.