ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಲಿಂಗತ್ವ ಅಲ್ಪಸಂಖ್ಯಾತರಿಗೆ ಯೋಜನೆಗಳ ಲಾಭ ತಲುಪಿಸಿ’

Published 28 ಜೂನ್ 2024, 16:17 IST
Last Updated 28 ಜೂನ್ 2024, 16:17 IST
ಅಕ್ಷರ ಗಾತ್ರ

ಯಾದಗಿರಿ: ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ರೂಪಿಸಲಾದ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪಿಸುವಂತೆ ಜಿಲ್ಲಾಧಿಕಾರಿ ಸುಶೀಲ ಬಿ. ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಲಿಂಗ, ಲಿಂಗತ್ವ, ಲೈಂಗಿಕತೆ ಸಂವೇದನಾಶೀಲ ತರಬೇತಿ ಉದ್ಘಾಟಿಸಿ ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿವಿಧ ನಿಗಮದ ಅಧಿಕಾರಿಗಳು, ಕಂದಾಯ, ಶಿಕ್ಷಣ ಇಲಾಖೆ, ವಿವಿಧ ಬ್ಯಾಂಕ್ ಅಧಿಕಾರಿಗಳು ಲಿಂಗತ್ವ ಅಲ್ಪಸಂಖ್ಯಾತರಿಗೆ ವಿವಿಧ ಸವಲತ್ತುಗಳನ್ನು ಆದ್ಯತೆ ಮೇಲೆ ತಲುಪಿಸಬೇಕು. ಅವರಿಗೆ ಸಕಾಲಕ್ಕೆ ಸ್ಪಂದಿಸಬೇಕು. ಅಧಿಕಾರಿಗಳು ನಿರ್ಲಕ್ಷ್ಯ ವಹಿಸುವಂತಿಲ್ಲ. ಆದ್ಯತೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರನ್ನು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕೆಲಸ ಮಾಡುವಂತೆ ಅವರು ನೀಡಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡಿ, ಡಿಎಚ್‌ಒ ಡಾ.ಪ್ರಭುಲಿಂಗ ಮಾನಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರೇಮಮೂರ್ತಿ ಕೆ., ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸುಲೈಮಾನ್ ನದಾಫ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಂಗಾಧರ ದೊಡ್ಮನಿ, ಕ್ರೀಡಾ ಇಲಾಖೆ ಅಧಿಕಾರಿ ರಾಜು ಬಾವಿಹಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಲಕ್ಷ್ಮಣ ಮಾಳವಿಕ, ಚೇಂಜ್ ಫೌಂಡೆಶನ್ ಅಧ್ಯಕ್ಷೆ ಮಾಯಾ ಎಸ್.ಆರ್.ನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT