ಶಹಾಪುರ: ತಾಲ್ಲೂಕಿನಲ್ಲಿ ಅಂಗವಿಕಲರ ಪಿಂಚಣಿಯು ಎರಡು ತಿಂಗಳಿಂದ ಸ್ಥಗಿತಗೊಳಿಸಿರುವುದನ್ನು ವಿರೋಧಿಸಿ ಅಂಗವಿಕಲರು ಹಾಗೂ ಪಾಲಕರು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಸಿದ್ಧಾರೂಢ ಬನ್ನಿಕೊಪ್ಪ ಅವರಿಗೆ ಮನವಿ ಸಲ್ಲಿಸಿದರು.

‘ಸರ್ಕಾರ ಅನವಶ್ಯಕವಾಗಿ ಇಲ್ಲದ ಹೊಸ ನಿಯಮಗಳನ್ನು ಜಾರಿಗೆ ತರುವುದು ಬೇಡ. ಸಾಕಷ್ಟು ಅಂಗವಿಕಲರು ತಮ್ಮ ಆರೋಗ್ಯದ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಔಷಧ ಖರೀದಿಗೆ ಪಿಂಚಣಿ ನೆರವಾಗಿದೆ. ಆದರೆ ಏಕಾಏಕಿ ಪಿಂಚಣಿ ಸ್ಥಗಿತಗೊಳಿಸಿರುವುದು ಸಾಕಷ್ಟು ತೊಂದರೆ ಉಂಟು ಮಾಡಿದೆ’ ಎಂದು ಅಂಗವಿಕಲರ ಮುಖಂಡ ಸಿದ್ದಯ್ಯ ಹಿರೇಮಠ ತಿಳಿಸಿದರು.

ಪ್ರತಿಭಟನೆಯಲ್ಲಿ ಹಣಮಂತ ಗೋನಾಲ, ಸುಭಾಶ ಹೊತಪೇಟ, ಯಶೋಧಾ ನಾಟೇಕರ್,ಪ್ರಕಾಶ ಕುಲಕರ್ಣಿ, ರೇಣುಕಾ ಪೂಜಾರಿ, ಮೌನೇಶ ಪತ್ತಾರ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-30-1792180429

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.