ಶಹಾಪುರ: ‘ದುರ್ಬಲ ವರ್ಗದ ವಿಶೇಷ ಚೇತನರ ಸ್ವಾವಲಂಬಿ ಜೀವನಕ್ಕೆ ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ಆಸರೆಯಾಗಲಿದೆ. ಅಲ್ಲದೆ ಜೀವನಮಟ್ಟ ಸುಧಾರಿಸುವುದರ ಜತೆಗೆ ಭವಿಷ್ಯದ ಬದುಕಿನ ಬಗ್ಗೆ ಆತ್ಮವಿಶ್ವಾಸವೂ ಹೆಚ್ಚಾಗಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು.

ನಗರದ ಸಚಿವರ ಕಚೇರಿಯಲ್ಲಿ ಸೋಮವಾರ ತಾಲ್ಲೂಕು ಪಂಚಾಯಿತಿಯ 2025-26ನೇ ಸಾಲಿನ ವಿಶೇಷ ಚೇತನರ ಅನಿರ್ಬಂಧಿತ ಅಭಿವೃದ್ಧಿ ಅನುದಾನದ ಅಡಿಯಲ್ಲಿ ಅಂಗವಿಕಲರಿಗೆ ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ವಿತರಿಸಿ ಅವರು ಮಾತನಾಡಿದರು.

‘ನಮ್ಮ ಮತಕ್ಷೇತ್ರ ವ್ಯಾಪ್ತಿಯ ಆಯ್ದ ಐದು ಜನ ಫಲಾನುಭವಿಗಳನ್ನು ಆಯ್ಕೆ ಮಾಡಿದೆ. ಯೋಜನೆಗಳ ಸೌಲಭ್ಯದ ಸದುಪಯೋಗ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಅವರ ಓಡಾಟದ ಸಮಸ್ಯೆ ನಿವಾರಿಸಿ, ಉದ್ಯೋಗ ಮತ್ತು ಶಿಕ್ಷಣದ ಅವಕಾಶಗಳಿಗೆ ಅನುಕೂಲ ಮಾಡಿಕೊಡುವುದು ತ್ರಿಚಕ್ರ ವಾಹನ ವಿತರಣೆಯ ಮುಖ್ಯ ಉದ್ದೇಶವಾಗಿದೆ’ ಎಂದು ತಿಳಿಸಿದರು.

ತಾ.ಪಂ ಇಒ ಬಸವರಾಜ ಶರಬೈ ಮಾತನಾಡಿ, ‘ದೈಹಿಕವಾಗಿ ಅಶಕ್ತರಾದ, ಆದಾಯ ಮಿತಿಯೊಳಗಿರುವ ಮತ್ತು ಚಾಲನಾ ಪರವಾನಗಿ ಹೊಂದಿರುವ ಫಲಾನುಭವಿಗಳನ್ನು ಆಯ್ಕೆ ಮಾಡಿದೆ. ಪ್ರತಿಯೊಂದು ತ್ರಿಚಕ್ರ ವಾಹನವು ವಿದ್ಯುತ್ ಬ್ಯಾಟರಿ ಚಾಲಿತವಾಗಿದ್ದು, ಸುರಕ್ಷತಾ ಕ್ರಮಗಳನ್ನು ಹೊಂದಿದೆ’ ಎಂದು ಅವರು ಮಾಹಿತಿ ನೀಡಿದರು

ತಾ.ಪಂ ಯೋಜನಾಧಿಕಾರಿ ಶಾರದಮ್ಮ ನಾಗ್ಲೋಟ್, ಅಂಗವಿಕಲರ ಹೋರಾಟ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಸಾಹೇಬ ಜಾನಿ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಶರಣಪ್ಪ, ಮಲ್ಲಿಕಾರ್ಜುನ, ಬಸವರಾಜ, ಪ್ರವೀಣ ಇತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-30-423964081

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.