ಶಹಾಪುರ: ಶಾಸಕ ಶರಣಬಸಪ್ಪ ದರ್ಶನಾಪುರ ಮಂಗಳವಾರ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ನಗರದ ಹೊರವಲಯದ ಕನ್ಯಾಕೊಳ್ಳೂರ ರಸ್ತೆ ಬಳಿ ₹4.70 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೌಲಾನಾ ಆಜಾದ್ ಶಾಲೆಯ ಕಟ್ಟಡ ಕಾಮಗಾರಿ ವೀಕ್ಷಿಸಿದರು. ನಿಗದಿತ ಅವಧಿಯಲ್ಲಿ ಕೆಲಸ ಪೂರ್ಣಗೊಳಿಸಬೇಕು ಎಂದು ಎಂಜಿನಿಯರ್ಗೆ ಸೂಚಿಸಿದರು.

ಕ್ರೀಡಾಂಗಣಕ್ಕೆ ಭೇಟಿ: ನಗರದ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕೆಕೆಆರ್ಡಿಬಿ ಯೋಜನೆ ಅಡಿಯಲ್ಲಿ ₹2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಲಾನ್ ಟೆನ್ನಿಸ್ ಕ್ರೀಡಾಂಗಣ ಕಾಮಗಾರಿಯನ್ನು ಪರಿಶೀಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೊರ ಕ್ರೀಡಾಂಗಣದೊಳಗೆ ₹1ಕೋಟಿ ವೆಚ್ಚದಲ್ಲಿ ನೀರು ನಿಲ್ಲದಂತೆ ಇನ್ನರ್ ಡ್ರೈನೇಜ್ ನಿರ್ಮಾಣ ಮಾಡಲಾಗುತ್ತಿದೆ. ಜೊತೆಗೆ ಹಿರಿಯರಿಗೆ ವಾಯು ವಿಹಾರಕ್ಕೆ ಟ್ರ್ಯಾಕಿಂಗ್ ವ್ಯವಸ್ಥೆ, ಕ್ರೀಡಾಂಗಣ ಸುತ್ತಲೂ ಗೋಡೆಗಳ ಭದ್ರತೆಗೆ ವ್ಯವಸ್ಥಿತ ಪಿಚ್ಚಿಂಗ್ ಮಾಡಲಾಗಿದೆ ಎಂದರು.

ಚೆಕ್ ವಿತರಣೆ: ಮತಕ್ಷೇತ್ರದ ವ್ಯಾಪ್ತಿಯಲ್ಲಿ ಮಠ ಮಂದಿರಗಳ ಜೀರ್ಣೋದ್ಧಾರಕ್ಕೆ ಮತ್ತು ನೂತನ ಕಟ್ಟಡಕ್ಕೆ ಹೆಚ್ಚಿನ ಅನುದಾನವನ್ನು ಒದಗಿಸಲಾಗಿದೆ. ಉಳಿದ 25 ಮಠ ಮಂದಿರಗಳಿಗೆ ಶಾಸಕರು ಕಾರ್ಯಾಲಯದಲ್ಲಿ ಅನುದಾನದ ಚೆಕ್ ವಿತರಿಸಿದರು.

ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮಹಾಂತ ಚಂದಾಪುರ, ನಗರ ಆಶ್ರಯ ಸಮಿತಿ ಅಧ್ಯಕ್ಷ ವಸಂತಕುಮಾರ ಸುರಪುರಕರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-30-1716720150

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.