ಶಹಾಪುರ: ‘ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯ ಯೋಜನೆ(ನರೇಗಾ) ನೋಂದಾಯಿತ ಕೂಲಿ ಕಾರ್ಮಿಕರ ಕುಟುಂಬಕ್ಕೆ ವರ್ಷದಲ್ಲಿ ನೂರು ದಿನ ಗ್ರಾಮ ಪಂಚಾಯಿತಿಯಿಂದ ನೀಡುವ ಕೂಲಿ ಕೆಲಸದ ಸದುಪಯೋಗ ಪಡೆದುಕೊಳ್ಳಿ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ ಹೇಳಿದರು.

ತಾಲ್ಲೂಕಿನ ಮದ್ರಿಕಿ ಗ್ರಾಮದಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿಯಡಿ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿ ನಂತರ ಅವರು ಮಾತನಾಡಿದರು.

‘ಸಕಾಲದಲ್ಲಿ ಕೂಲಿ ಪಾವತಿಯಾಗುತ್ತಿದೆಯಾ, ಕೆಲಸದ ಸ್ಥಳದಲ್ಲಿ ಕುಡಿಯುವ ನೀರು, ನೆರಳು, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಸೇರಿದಂತೆ ಇತರೆ ಅಗತ್ಯ ಸೌಲಭ್ಯಗಳಿವೆ’ ಎಂದು ವಿಚಾರಿಸಿದರು. ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರ ಮಸ್ಟರ್ ರೂಲ್ ಹಾಗೂ ಫೋಟೊ ಆಧಾರಿತ ಹಾಜರಾತಿ ಪರಿಶೀಲಿಸಿದರು.

‘ನರೇಗಾ ಯೋಜನೆ ಗ್ರಾಮೀಣ ಜನರ ಬದುಕಿಗೆ ಆಸರೆಯಾಗಬೇಕು. ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡಿ, ಯೋಜನೆಯಡಿ ಜಾಬ್ ಕಾರ್ಡ್ ಪಡೆದ ಪ್ರತಿ ಕುಟುಂಬಕ್ಕೂ ನೂರು ದಿನಗಳ ಕೂಲಿ ಕೆಲಸದ ಖಾತ್ರಿಯಾಗಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ನರೇಗಾ ಯೋಜನೆ ನಿಲ್ಲಿಸಲಾಗಿದೆ ಎಂದು ಜನರಲ್ಲಿ ತಪ್ಪು ಮಾಹಿತಿ ಹರಡುತ್ತಿದ್ದು, ಇದು ಸರಿಯಲ್ಲ. ಬೇಸಿಗೆ ಇರುವುದರಿಂದ ರೈತರ ಹೊಲದಲ್ಲಿ ಕೂಲಿಕಾರರಿಗೆ ಕೆಲಸಗಳಿಲ್ಲ, ಹೀಗಾಗಿ ಕೂಲಿ ಕೆಲಸಕ್ಕಾಗಿ ಗ್ರಾಮ ಪಂಚಾಯಿತಿಗೆ ಬರುವ ಜನರಿಗೆ ಸರಿಯಾದ ಮಾಹಿತಿ ನೀಡಿ, ಕೆಲಸಕ್ಕಾಗಿ ದೂರದ ನಗರ ಪಟ್ಟಣಗಳಿಗೆ ವಲಸೆ ಹೋಗದಂತೆ ಜನರಿಗೆ ಕೆಲಸ ಕೊಡಬೇಕು’ ಎಂದು ತಿಳಿಸಿದರು.

ಈ ವೇಳೆ ತಾ.ಪಂ ಇಒ ಬಸವರಾಜ ಶರಬೈ, ತಾ.ಪಂ ಸಹಾಯಕ ನಿರ್ದೇಶಕಿ ಅಕ್ಕನಾಗಮ್ಮ, ಮದ್ರಕಿ ಗ್ರಾ.ಪಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೇವರಾಜ ಗೋನಾಲ, ನರೇಗಾ ಯೋಜನೆಯ ತಾಂತ್ರಿಕ ಸಂಯೋಜಕ ವೆಂಕಟರಡ್ಡಿ, ತಾಂತ್ರಿಕ ಸಹಾಯಕ ಪ್ರವೀಣ ಕಟ್ಟಿಮನಿ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-30-361982696

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.