‘ಅಭಿವೃದ್ಧಿ ನಿರಂತರ ಪ್ರಕ್ರಿಯೆ’
ಕಾಲ ಬದಲಾದಂತೆ ಜನರ ಬೇಡಿಕೆಗಳು ಹೆಚ್ಚುತ್ತವೆ. ಅದರಂತೆ ಅಭಿವೃದ್ಧಿ ಕೆಲಸವು ನಿರಂತರವಾದ ಪ್ರಕ್ರಿಯೆಯಾಗಿದೆ. ಅದರಂತೆ ಜಿಲ್ಲೆಯಲ್ಲಿ ಅಗತ್ಯ ಸೌಲಭ್ಯಗಳಿಗೆ ಬೇಡಿಕೆ ಇಡುತ್ತ, ಅನುಷ್ಠಾನಗೊಳಿಸುವ ಕೆಲಸವಾಗಬೇಕು. ಇದಕ್ಕೆ ಅಧಿಕಾರಿ ವರ್ಗ ಸಾಥ್ ನೀಡಬೇಕು ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು. ಒಂದು ತಿಂಗಳಲ್ಲಿ ನಮ್ಮ ಸರ್ಕಾರ ಮೂರು ಗ್ರಾ.ಪಂಗಳನ್ನು ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜಗೇರಿಸುವ ಮೂಲಕ ಉತ್ತಮ ನಿರ್ಧಾರ ತೆಗೆದುಕೊಂಡಿದೆ. ಅದರಲ್ಲಿ ಕ್ಷೇತ್ರದ ಶಾಸಕರ ಪಾತ್ರ ಹೆಚ್ಚಿನದಾಗಿದೆ ಎಂದರು.