ಶಹಾಪುರ: ‘ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಂತೆ ಶಾಲೆಗಳು ಪುನರಾರಂಭಗೊಳ್ಳುತ್ತಲಿವೆ. ಮಕ್ಕಳನ್ನು ಶಾಲೆಗೆ ಕರೆತರಲು ವಾಹನಗಳ ಮೇಲೆ ಪಾಲಕರು ಅವಲಂಬಿತರಾಗಿದ್ದಾರೆ. ಆದರೆ ತಾಲ್ಲೂಕಿನಲ್ಲಿ ಡೀಸೆಲ್ ಸಮಸ್ಯೆ ಬಿಗಡಾಯಿಸಿದೆ. ಇನ್ನೆರಡು ದಿನಗಳಲ್ಲಿ ಡೀಸೆಲ್ ಸಮಸ್ಯೆಯನ್ನು ಬಗೆಹರಿಸಿ ಶಾಲಾ ವಾಹನಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿಗೆ ಖಾಸಗಿ ಶಾಲೆಗಳ ಒಕ್ಕೂಟದ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಚೆನ್ನಬಸ್ಸು ವನದುರ್ಗ ಮನವಿ ಮಾಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ‘ಈಗಾಗಲೇ ಹಲವಾರು ಕಡೆ ಪೆಟ್ರೋಲ್ ಬಂಕ್ಗಳಲ್ಲಿ ಡೀಸೆಲ್ ನೋ ಸ್ಟಾಕ್ ನಾಮಫಲಕ ಹಾಕಿದ್ದಾರೆ. ಅಲ್ಲದೆ ಬಂಕ್ ಮುಂದೆ ಡಬ್ಬಾ ಹಾಗೂ ಟ್ರ್ಯಾಕ್ಟರ್ ಹಾಗೂ ಇನ್ನಿತರ ವಾಹನಗಳು ಸಾಕಷ್ಟು ದೂರದಲ್ಲಿ ಸರದಿಯಲ್ಲಿ ನಿಂತಿರುವುದು ಸಾಮಾನ್ಯವಾಗಿದೆ. ತಾಲ್ಲೂಕಿನಲ್ಲಿ ಡೀಸೆಲ್ ಕೃತಕ ಅಭಾವ ಉಂಟು ಮಾಡಿರುವ ಅಪಾಯ ಇದೆ. ಇದರ ಬಗ್ಗೆ ಗಮನಹರಿಸಬೇಕು. ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಕುಂಠಿತವಾಗದಂತೆ ನೋಡಿಕೊಳ್ಳಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-30-1675596473

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.