ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಹಾಪುರ: ನಗರಸಭೆ ಅಧ್ಯಕ್ಷೆ, ಉಪಾಧ್ಯಕ್ಷೆ ಪದಗ್ರಹಣ

Published : 6 ಸೆಪ್ಟೆಂಬರ್ 2024, 14:05 IST
Last Updated : 6 ಸೆಪ್ಟೆಂಬರ್ 2024, 14:05 IST
ಫಾಲೋ ಮಾಡಿ
Comments

ಶಹಾಪುರ: ನಗರಸಭೆಯ ನೂತನ ಅಧ್ಯಕ್ಷೆಯಾಗಿರುವ ಕಾಂಗ್ರೆಸ್ ಪಕ್ಷದ ಮೆಹರುನ್ನೀಸಾ ಹಾಗೂ ಉಪಾಧ್ಯಕ್ಷೆ ಭೀಮಾಬಾಯಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಪೌರಾಯುಕ್ತ ರಮೇಶ ಬಡಿಗೇರ ಮಾತನಾಡಿ, ಹಲವು ತಿಂಗಳ ಕಾಲ ಆಡಳಿತಾಧಿಕಾರಿಯಾಗಿ ಕೆಲಸ ನಿರ್ವಹಿಸಲಾಗಿತ್ತು. ಈಗ ನೂತನ ಅಧ್ಯಕ್ಷರು ಅಧಿಕಾರ ಸ್ವೀಕಾರದಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ನಗರದ ಜನತೆಗೆ ಅಗತ್ಯವಾದ ಮೂಲ ಸೌಲಭ್ಯಗಳನ್ನು ಒದಗಿಸಲಾಗುವುದು. ನೂತನ ಅಧ್ಯಕ್ಷರಿಗೆ ಹಾಗೂ ಉಪಾಧ್ಯಕ್ಷರಿಗೆ ನಮ್ಮ ಸಿಬ್ಬಂದಿ ಸಂಪೂರ್ಣ ಸಹಕಾರ ನೀಡಲಿದೆ ಎಂದರು.

ಬಿಜೆಪಿಯಿಂದ ಬಂದ 9 ಸದಸ್ಯರು ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸನ್ಮಾನಿಸುವುದರ ಮೂಲಕ ಅಚ್ಚರಿಸಿ ಮೂಡಿಸಿದರು. ಕೇವಲ 3 ಸದಸ್ಯರು ಮಾತ್ರ ಬಿಜೆಪಿಯಲ್ಲಿ ಉಳಿದುಕೊಂಡಿದ್ದಾರೆ. ಬಿಜೆಪಿಯಿಂದ ಪಕ್ಷಾಂತರ ಮಾಡಿರುವ ಸದಸ್ಯರ ವಿರುದ್ಧ ಬಿಜೆಪಿ ಇನ್ನೂ ಯಾವುದೇ ಕ್ರಮಕೈಗೊಂಡಿಲ್ಲ.

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅಮರೇಶಗೌಡ ದರ್ಶನಾಪುರ, ಎಂಜಿನೀಯರ್ ನಾನಾ ಸಾಹೇಬ್ ಮಡಿವಾಳಕರ್, ನಗರ ಆಶ್ರಯ ಸಮಿತಿ ಅಧ್ಯಕ್ಷ ವಸಂತ ಸುರಪುರಕರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ತಾಲ್ಲೂಕು ಘಟಕದ ಅಧ್ಯಕ್ಷ ಗೌಡಪ್ಪಗೌಡ ಆಲ್ದಾಳ ಹಾಗೂ ಎಸ್‌ಡಿಪಿಐ ಪಕ್ಷದ ಮುಖಂಡ ಖಾಲಿದ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ಶಿವಮಹಾಂತ ಚಂದಾಪುರ, ಸಣ್ಣ ನಿಂಗಣ್ಣ ನಾಯ್ಕೋಡಿ, ಅಯ್ಯಣ್ಣ ಕನ್ಯಾಕೊಳ್ಳುರ, ಮಹಾದೇವಪ್ಪ ಸಾಲಿಮನಿ, ಶಾಂತಪ್ಪ ಗುತ್ತೆದಾರ, ಮುಸ್ತಾಫ್ ದರ್ಬಾನ್ ಹಾಗೂ ನಗರಸಭೆಯ ಸದಸ್ಯರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT