ಸುರಪುರ: ‘ಶಾಮನೂರು ಶಿವಶಂಕರಪ್ಪ ಕೊಡಗೈ ದಾನಿಗಳಾಗಿದ್ದರು. ರಾಜ್ಯದ ಅನೇಕ ಜಿಲ್ಲೆಗಳ ವಿದ್ಯಾರ್ಥಿ ವಸತಿ ನಿಲಯಗಳಿಗೆ ತಮ್ಮ ಸ್ವಂತ ಹಣದಿಂದ ದೇಣಿಗೆ ನೀಡುವ ಮೂಲಕ ಮಾದರಿಯಾಗಿದ್ದಾರೆ’ ಎಂದು ತಾಲ್ಲೂಕು ವೀರಶೈವ-ಲಿಂಗಾಯತ ಸಮಾಜದ ಅಧ್ಯಕ್ಷ ಸುರೇಶ ಸಜ್ಜನ ತಿಳಿಸಿದರು.

ಇಲ್ಲಿಯ ಬಸವೇಶ್ವರ ಪತ್ತಿನ ಸಹಕಾರ ಸಂಘದಲ್ಲಿ ಸೋಮವಾರ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಆಯೋಜಿಸಿದ್ದ ಶಾಸಕ ಶಾಮನೂರು ಶಿವಶಂಕರಪ್ಪನವರ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.

‘ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಅಖಂಡ ವೀರಶೈವ ಲಿಂಗಾಯತ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಧಾರ್ಮಿಕ ಪರಂಪರೆಯ ಗುರುವಿರಕ್ತರನ್ನು ಒಂದುಗೂಡಿಸಲು ನಿರಂತರವಾಗಿ ಶ್ರಮಿಸಿದ್ದಾರೆ’ ಎಂದರು.

‘ಹಲವು ದಶಕಗಳ ಪಂಚಪೀಠದ ಜಗದ್ಗುರುಗಳು ಸಮಸ್ಯೆಯನ್ನು ಬಗೆಹರಿಸಿ ದಾವಣಗೆರೆಯಲ್ಲಿ ಪಂಚಪೀಠ ಜಗದ್ಗುರುಗಳನ್ನು ಒಂದುಗೂಡಿಸಿ ಧಾರ್ಮಿಕ ಸಮಾವೇಶ ಯಶಸ್ವಿಗೊಳಿಸಿದ್ದರು. ವೀರಶೈವ, ಲಿಂಗಾಯತ ಎರಡು ಒಂದೇ ಎಂದು ಏಕತೆಯನ್ನು ಸಾರಿದ್ದರು. ಅವರ ನಿಧನದಿಂದ ಸಮಾಜಕ್ಕೆ ಅಪಾರ ನಷ್ಟವಾಗಿದೆ’ ಎಂದು ತಿಳಿಸಿದರು.

ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿ, ‘ವೀರಶೈವ ಮಹಾಸಭೆಯಲ್ಲಿ ನಿರಂತರವಾಗಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಸಮಾಜದ ಸಂಘಟನೆಗೆ ತಮ್ಮ ಇಳಿ ವಯಸ್ಸಿನಲ್ಲಿಯೂ ಸೇವೆ ಸಲ್ಲಿಸುತ್ತಿದ್ದರು. ಬಾಪುಜಿ ಶಿಕ್ಷಣ ಸಂಸ್ಥೆ ಮತ್ತು ಸಹಕಾರಿ ಸಂಘವನ್ನು ಪ್ರಾರಂಭಿಸಿ ದಾವಣಗೆರೆಯಲ್ಲಿ ಶೈಕ್ಷಣಿಕ ಮತ್ತು ಸಹಕಾರ ಕ್ರಾಂತಿಯನ್ನು ಮಾಡಿದ್ದಾರೆ. ಉದ್ಯಮ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸಿದ್ದಾರೆ. ಶಾಸಕರಾಗಿ, ಸಚಿವರಾಗಿ ಜನಪರ ಸೇವೆ ಮಾಡಿದ್ದಾರೆ’ ಎಂದರು.

ಮುಖಂಡ ಮಲ್ಲಿಕಾರ್ಜುನರೆಡ್ಡಿ ಅಮ್ಮಾಪುರ ಮಾತನಾಡಿದರು. ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಸನಗೌಡ ಪಾಟೀಲ ದೇವಾಪುರ, ಬಸವೇಶ್ವರ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ವೀರೇಶ ನಿಷ್ಠಿ ದೇಶಮುಖ, ಮುಖಂಡರಾದ ಶಿವಶರಣಪ್ಪ ಹೆಡಗಿನಾಳ, ಮಂಜುನಾಥ ಗುಳಗಿ, ಸಿದ್ದಲಿಂಗಯ್ಯಸ್ವಾಮಿ ಕಡ್ಲಪ್ಪಮಠ, ಶರಣಬಸವ ಹೂಗಾರ, ಚೆನ್ನಬಸಯ್ಯಸ್ವಾಮಿ ಜೆಟಗಿಮಠ, ಸಿದ್ದನಗೌಡ ಹೆಬ್ಬಾಳ, ಪ್ರಕಾಶ ಹೆಮ್ಮಡಗಿ, ಅಮರೇಶ ಕುಂಬಾರ, ಮಲ್ಲಿಕಾರ್ಜುನ ಮುಧೋಳ, ಶರಣಗೌಡ ಕಿರದಳ್ಳಿ, ಸಂದೀಪ ಜೋಷಿ, ಅನ್ನಪೂರ್ಣ ಜಕರೆಡ್ಡಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.