ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲ್ಯಾಣ ಕರ್ನಾಟಕ ಉತ್ಸವ: ಯಾದಗಿರಿಯಲ್ಲಿ ಸಚಿವ ಶರಣಬಸಪ್ಪ ದರ್ಶನಾಪುರ ಧ್ವಜಾರೋಹಣ

Published : 17 ಸೆಪ್ಟೆಂಬರ್ 2024, 4:30 IST
Last Updated : 17 ಸೆಪ್ಟೆಂಬರ್ 2024, 4:30 IST
ಫಾಲೋ ಮಾಡಿ
Comments

ಯಾದಗಿರಿ: ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ರಾಷ್ಟ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ನೆರವೇರಿಸಿದರು.

ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಇದಾದ ಬಳಿಕ ಆಕರ್ಷಕ ಪಥ ಸಂಚಲನ ನಡೆಯಿತು‌.

ಈ ವೇಳೆ ಮಾತನಾಡಿದ ಸಚಿವರು, ಹೈದರಾಬಾದ್ ಪ್ರಾಂತ್ಯವು ಸ್ವತಂತ್ರವಾಗಿ ಭಾರತದೊಂದಿಗೆ ವಿಲೀನವಾದ ದಿನವನ್ನು ನೆನಪಿಸಿಕೊಳ್ಳಲು ಆಗ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸಲಾಗುತ್ತಿದ್ದು, ಈಗ ಕಲ್ಯಾಣ ಕರ್ನಾಟಕ ಉತ್ಸವವಾಗಿ ಮಾಡಲಾಗುತ್ತಿದೆ ಎಂದು ಹೇಳಿದರು.

1947 ರ ಆಗಸ್ಟ್ 15 ರಂದು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು.‌ ಆದರೆ, ಅಂದಿನ ಹೈದರಾಬಾದ್ ಪ್ರಾಂತ್ಯ ವಿಲೀನಕ್ಕೆ ಒಪ್ಪದೇ ಇದ್ದಾಗ ನಿಜಾಮರ ವಿರುದ್ಧ ಆಪರೇಷನ್ ಪೊಲೋ ಮಾಡಿ ನಿಜಾಮರ ಸೈನ್ಯವನ್ನು ಹತ್ತಿಕ್ಕುವಲ್ಲಿ ಯಶಸ್ವಿಯಾಯಿತು ಎಂದರು.

ಯಾದಗಿರಿಯಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಮೂರ್ತಿ ಸ್ಥಾಪನೆಗೆ ಈಗಾಗಲೇ ಯೋಜನೆ ರೂಪಿಸಿದ್ದೇವೆ. ನಿಜಾಮರ ಆಳ್ವಿಕೆಯಲ್ಲಿ ಈ ಭಾಗ ಹಿಂದುಳಿದಿವೆ. ಈ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಿದ್ದರಿಂದ ರಾಜ್ಯದ ಇನ್ನಿತರರೊಂದಿಗೆ ಸ್ಪರ್ಧಿಸಲು ಅವಕಾಶವಾಗಿದೆ. ಗುಲಾಮಗಿರಿಯೊಂದಿಗೆ ಇದ್ದೇವು. ಈಗ ಅದು ನೀಗಿದೆ‌. ರಾಜ್ಯದ ಅಭಿವೃದ್ಧಿಗೆ ಪಂಚ ಗ್ಯಾರಂಟಿ ಜಾರಿ ಮಾಡಲಾಗಿದೆ ಎಂದರು‌.

ಈ ಭಾಗದಲ್ಲಿ ಸ್ವತಂತ್ರಕ್ಕಾಗಿ ಎರಡು ಬಾರಿ ಹೋರಾಟ ಮಾಡಲಾಗಿದೆ. ಇತಿಹಾಸ ಓದಬೇಕು. ಮೈಸೂರು ಮಹಾರಾಜರು ಪ್ರಗತಿಪರ ಚಿಂತಕರಾಗಿದ್ದು, ನೀರಾವರಿ ಸೌಲಭ್ಯ ಒದಗಿಸಿದ್ದರು ಎಂದು ಹೇಳಿದರು.

ಇದೇ ವೇಳೆ ಸ್ವಚ್ಛಯೇ ಹೇ ಸೇವೆಗೆ ಚಾಲನೆ ನೀಡಲಾಯಿತು.‌ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಯೂಡಾ ಅಧ್ಯಕ್ಷ ವಿನಾಯಲ ಮಾಲಿಪಾಟೀಲ, ಜಿಲ್ಲಾಧಿಕಾರಿ ಡಾ.ಸುಶೀಲಾ, ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರ್ಡಿಯಾ, ಅರಣ್ಯ ಸಂರಕ್ಷಣಾ ಅಧಿಕಾರಿ ಕಾಜೋಲ್ ಪಾಟೀಲ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT