ಭಾನುವಾರ, ಆಗಸ್ಟ್ 1, 2021
21 °C

ಕುಡಿಯುವ ನೀರಿನ ಸಮಸ್ಯೆ ಉಲ್ಬಣ: ಶಿರವಾಳ ಗ್ರಾಮಸ್ಥರಿಗೆ ಹಳ್ಳದ ನೀರೇ ಆಸರೆ

ಟಿ.ನಾಗೇಂದ್ರ Updated:

ಅಕ್ಷರ ಗಾತ್ರ : | |

Prajavani

ಶಿರವಾಳ (ಶಹಾಪುರ): ಗ್ರಾಮವು ಭೀಮಾ ನದಿಯಿಂದ ಕೇವಲ ಎರಡು ಕಿ.ಮೀ ದೂರ ಇದೆ. ಆದರೆ ಗ್ರಾಮ ಪಂಚಾಯಿತಿಯ ನಿರ್ವಹಣೆಯ ಸಮಸ್ಯೆಯಿಂದಾಗಿ ಗ್ರಾಮಸ್ಥರು ಗ್ರಾಮಕ್ಕೆ ಹೊಂದಿಕೊಂಡಿರುವ ಹಳ್ಳದ ನೀರನ್ನು ಕುಡಿಯಲು ಉಪಯೋಗಿಸುತ್ತಾರೆ. ಮಳೆಗಾಲ ಆರಂಭವಾಗಿದ್ದರಿಂದ ಕಲುಷಿತ ನೀರು ಸೇವನೆಯಿಂದ ಸಾಂಕ್ರಾಮಿಕ ರೋಗದ ಭೀತಿ ಗ್ರಾಮಸ್ಥರಿಗೆ ಕಾಡುತ್ತಲಿದೆ.

‘ಸಾಕಷ್ಟು ಹಣ ವೆಚ್ಚ ಮಾಡಿ ಭೀಮಾ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡುವ ವ್ಯವಸ್ಥೆಯನ್ನು ಮಾಡಲಾಗಿತ್ತು. ಆದರೆ ಗ್ರಾಮ ಪಂಚಾಯಿತಿ ಸಿಬ್ಬಂದಿಯಿಂದ ಸಮರ್ಪಕವಾಗಿ ನೀರು ನಿರ್ವಹಣೆ ಮಾಡುತ್ತಿಲ್ಲ. ಸಾಕಷ್ಟು ನೀರಿನ ಲಭ್ಯತೆ ಇದ್ದರೂ ಸಹ ಕೃತಕ ಅಭಾವ ಸೃಷ್ಟಿಯಾಗಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾತ್ರ ಕಚೇರಿಗೆ ಆಗಮಿಸುವುದಿಲ್ಲ. ಗ್ರಾಮದ ಸಮಸ್ಯೆಯನ್ನು ಯಾರ ಮುಂದೆ ಹೇಳಬೇಕು ಎಂದು ಪ್ರಶ್ನಿಸುತ್ತಾರೆ‘ ಗ್ರಾಮದ ನಿವಾಸಿ ಶಾಂತಪ್ಪ ಮ್ಯಾಗೇರಿ.

ಗ್ರಾಮದ ವಾರ್ಡ್ ನಂಬರ್ 3,4,5 ರಲ್ಲಿ ನೀರಿನ ಸಮಸ್ಯೆ ತುಂಬಾ ಕಾಡುತ್ತಲಿದೆ. ಹಳ್ಳದ ನೀರು ಕುಡಿಯಲು ಉಪಯೋಗಿಸುವಂತೆ ಆಗಿದೆ. ಈಗ ಮಳೆಗಾಲ ಆರಂಭವಾಗಿದೆ. ಹಳ್ಳದಲ್ಲಿ ದುರ್ವಾಸನೆ ಕಲುಷಿತ ನೀರು ಹರಿದು ಬರುತ್ತಿರುವುದರಿಂದ ನೀರು ಸೇವನೆಯಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ನಮ್ಮನ್ನು ಕಾಡುತ್ತಲಿದೆ. ಹಲವು ವರ್ಷದ ಹಿಂದೆ ನಿರ್ಮಿಸಿದ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತಿದೆ. ಹನಿ ನೀರು ಬಂದಿಲ್ಲ. ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಯ ತುಂಬೆಲ್ಲ ಚರಂಡಿ ನೀರು ಹರಿಯುತ್ತಲಿವೆ. ಅಲ್ಲದೆ ಚರಂಡಿ ವ್ಯವಸ್ಥೆ ಇರುವ ಕಡೆ ಹೂಳು ತುಂಬಿಕೊಂಡಿವೆ ಎಂದು ಗ್ರಾಮಸ್ಥರು ಆರೋಪಿಸಿದರು.

ಗ್ರಾಮಕ್ಕೆ ತಕ್ಷಣ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಗ್ರಾಮದ ಜನತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು