ಶನಿವಾರ, ಜನವರಿ 18, 2020
26 °C

ಕರದಳ್ಳಿಯವರಿಗೆ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲೆಯ ಮಕ್ಕಳ ಸಾಹಿತಿ, ರಾಜ್ಯೋತ್ಸವ ಪ್ರಶಸ್ತಿ ಪಡೆದ ಚಂದ್ರಕಾಂತ ಕರದಳ್ಳಿಯವರ ಅಕಾಲಿಕ ನಿಧನಕ್ಕೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.

ಕರದಳ್ಳಿಯವರ ಭಾವಚಿತ್ರಕ್ಕೆ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಿ.ಎಂ.ಜಗದೀಶ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ‘ಕರದಳ್ಳಿಯವರು ಶಿಕ್ಷಕ ವೃತ್ತಿಯ ಜತೆಗೆ ಸಾಹಿತ್ಯದಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ. ಅಲ್ಲದೆ, ಅವರು ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದನ್ನು ಮರೆಯುವತಿಲ್ಲ. ಅವರ ಆಕಸ್ಮಿಕ ಅಗಲಿಕೆಯಿಂದ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ’ ಎಂದು ಸಂತಾಪ ವ್ಯಕ್ತಪಡಿಸಿದರು.

ಸಂಘದ ರಾಜ್ಯ ಘಟಕದ ಸದಸ್ಯ ಅನಿಲ ದೇಶಪಾಂಡೆ ಮಾತನಾಡಿ, ಕರದಳ್ಳಿಯವರ ಒಡನಾಡಿ ಅವರ ಸಾಹತ್ಯ ರಚನೆ ಸೇರಿದಂತೆ ಮಕ್ಕಳ ಬಗ್ಗೆ ಇರುವ ಕಳಕಳಿ ಕುರಿತು ಅಭಿಪ್ರಾಯ ಹಂಚಿಕೊಂಡರು. ಅವರ ಅಗಲಿಕೆ ಸಗರನಾಡಿಗೆ ತುಂಬಲಾರದ ನಷ್ಟವಾಗಿದೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕು’ ಎಂದರು.

ಪತ್ರಕರ್ತರಾದ ಶಂಕರಪ್ಪ ಅರುಣಿ, ಅನಿಲ ಬಾಸೂದೆ, ಕುಮಾರಸ್ವಾಮಿ ಮಾತನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಲಕರ್ಣಿ, ಸಿದ್ದಪ್ಪ ಲಿಂಗೇರಿ, ರೂಪೇಶ ಹುಲಿಕರ್‌, ರಜನಿಕಾಂತ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು