ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇಶದ ಏಕತೆಗೆ ಶ್ರಮಿಸಿದ ನಾಯಕ ಶ್ಯಾಮ್‌ ಪ್ರಸಾದ್ ಮುಖರ್ಜಿ‘

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶ್ಯಾಮ್‌ ಪ್ರಸಾದ್ ಮುಖರ್ಜಿ ಬಲಿದಾನ ದಿವಸ
Last Updated 23 ಜೂನ್ 2021, 16:57 IST
ಅಕ್ಷರ ಗಾತ್ರ

ಯಾದಗಿರಿ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ಡಾ.ಶ್ಯಾಮ್‌ಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿವಸ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಸಸಿ ನೆಡಲಾಯಿತು.

ನಂತರ ಮಾತನಾಡಿದ ಶಾಸಕ ವೆಂಕಟರಡ್ಡಿ ಮುದ್ನಾಳ, ಮುಖರ್ಜಿಯವರು ಸ್ವಾತಂತ್ರ್ಯೋತ್ತ ರದಲ್ಲಿ ಹಿಂದೂಗಳ ಮೇಲಿನ ಶೋಷಣೆಯ ವಿರುದ್ಧ ಪ್ರಮುಖ ಧ್ವನಿಯಾಗಿದ್ದರು. ಜನ ಸಂಘ ಪಕ್ಷ ಕಟ್ಟಿ ಜಮ್ಮು-ಕಾಶ್ಮೀರದಲ್ಲಿನ ಹಿಂದೂಗಳ ಪರವಾಗಿ ತಮ್ಮ ಜೀವವನ್ನೇ ತ್ಯಾಗ ಮಾಡಿದ ಮಹಾನ್ ನಾಯಕ ಎಂದು ಬಣ್ಣಿಸಿದರು.

ಪ್ರತಿ ಕಾರ್ಯದಲ್ಲೂ ಮಾತಿನಲ್ಲೂ ದೇಶಾಭಿಮಾನ ಎದ್ದು ಕಾಣುತ್ತಿತ್ತು. ದುಷ್ಟ ಶಕ್ತಿಗಳಿಂದ ದೇಶ ವಿಭಜಿಸುವ ಹುನ್ನಾರ ನಡೆದಾಗ ಪ್ರತಿ ಹಂತದಲ್ಲಿಯೂ ಪ್ರಬಲವಾಗಿ ವಿರೋಧಿಸುತ್ತಾ ಬಂದರು. ದೇಶದ ಏಕತೆ ಅಖಂಡತೆಗೆ ಅವರಿಗಿದ್ದ ಪ್ರೇಮ, ಕಾಳಜಿ, ಪ್ರತಿಯೊಬ್ಬ ಭಾರತೀಯನಿಗೆ ಅವರ ಮೇಲೆ ಅಪಾರ ಗೌರವ ಮೂಡಿಸುತ್ತದೆ ಎಂದು ಹೇಳಿದರು.

ಈ ವೇಳೆ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಶರಣಭೂಪಾಲರಡ್ಡಿ, ಮುಖರ್ಜಿಯವರು ನೀತಿ, ತತ್ವದ ಆಧಾರದ ಮೇಲೆ ನೆಹರೂ ನೇತೃತ್ವದ ಮಂತ್ರಿ ಮಂಡಲಕ್ಕೆ ರಾಜೀನಾಮೆ ನೀಡಿದರು. ಈ ಮೂಲಕಮಂತ್ರಿ ಪದವಿ ತ್ಯಾಗ ಮಾಡಿದ ಸ್ವಾತಂತ್ರ್ಯ ಭಾರತದ ಪ್ರಥಮ ರಾಷ್ಟ್ರ ನಾಯಕ ಶ್ಯಾಮ್ ಪ್ರಸಾದ್ ಮುಖರ್ಜಿಯವರು. ದೇಶದ ಪರಿಸ್ಥಿತಿ ಅಧೋಗತಿಗೆ ಇಳಿದಾಗ, ರಾಜಕೀಯ ಅಸ್ಥಿರತೆ, ಆಡಳಿತ ದೋಷ ಕಂಡಾಗ‘ಭಾರತೀಯ ಜನಸಂಘ’ ಎಂಬ ಹೊಸ ಪಕ್ಷಕ್ಕೆ ನಾಂದಿ ಹಾಡಿದರು ಎಂದರು.

1953 ಅಕ್ಟೋಬರ್ 23 ರಂದು ಕಾಶ್ಮೀರವನ್ನು ಭಾರತದಲ್ಲಿ ಉಳಿಸಲು ನಡೆಸಿದ ಹೋರಾಟದಲ್ಲಿ ಮುಖರ್ಜಿಯವರು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದರು. ದೇಶದ ಏಕತೆಗಾಗಿ ಶ್ರಮಿಸಿದ ಮಹಾನ್ ನಾಯಕ ಶ್ಯಾಮ್ ಪ್ರಸಾದ್ ಮುಖರ್ಜಿಪುಣ್ಯತಿಥಿಯನ್ನು ಬಲಿದಾನ ದಿನವಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದೇವೇಂದ್ರನಾಥ ನಾದ, ವೆಂಕಟರೆಡ್ಡಿ ಅಬ್ಬೆತುಮಕೂರು, ಗುರು ಕಾಮಾ, ಯುಡಾ ಅಧ್ಯಕ್ಷ ಬಸುರಾಜ ಚಂಡ್ರಕಿ, ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಲಲಿತಾ ಅನಪುರ, ನಗರ ಮಂಡಲ ಅಧ್ಯಕ್ಷ ಸುರೇಶ ಅಂಬಿಗೇರ, ಖಂಡಪ್ಪ ದಾಸನ್, ಶರಣಗೌಡ ಬಾಡಿಯಾಳ, ಅನಿತಾ ಜಗನ್ನಾಥ್, ಮಲ್ಲಣ್ಣಗೌಡ ಗುರುಸುಣಗಿ, ಶೈಲಜಾ ಹಾಗೂ ಪ್ರಮುಖರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT