ಯಾದಗಿರಿ:ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಹರಡುತ್ತಿರುವುದರಿಂದ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರು ಸೂಚಿಸಿದ್ದಾರೆ.

ಗಣೇಶೋತ್ಸವದ ಮಾರ್ಗಸೂಚಿಗಳು

ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನ, ಮನೆ, ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಗಳನ್ನು ನಾಲ್ಕು ಅಡಿ ಎತ್ತರ ಹಾಗೂ ಮನೆಗಳಲ್ಲಿ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸಬೇಕು ಎಂದು ತಿಳಿಸಿದ್ದಾರೆ.

ಪಾರಂಪರಿಕವಾಗಿ ಗಣೇಶೋತ್ಸವ ಸಮಿತಿಗಳು, ಗಣೇಶ ಮಂಡಳಿಗಳು, ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಪೊಲೀಸ್ ಇಲಾಖೆ, ಜೆಸ್ಕಾಂ, ಮುನಿಸಿಪಲ್ ಕಾರ್ಪೋರೇಷನ್, ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯಬೇಕು. ಒಂದು ವಾರ್ಡ್‌ಗೆ, ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಮಾತ್ರ ಆಚರಿಸಲು ಪ್ರೋತ್ಸಾಹಿಸುವುದು. ಇಂಥ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣ ನಿರ್ಮಿಸುವುದು. ಒಮ್ಮೆ20ಕ್ಕಿಂತ ಹೆಚ್ಚು ಜನ ಸೇರದಂತೆ ಭಕ್ತರಿಗೆ ಅವಕಾಶ ಮಾಡಬಾರದು. ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ ನೃತ್ಯ ಹಾಗೂ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ.

ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿರ್ಸಜಿಸುವಾಗ ಮೆರವಣಿಗೆ ನಿರ್ಬಂಧಿಸಲಾಗಿದೆ.ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕರ್‌ಗಳಲ್ಲಿ ಅಥವಾ ಕೃತಕ ವಿರ್ಸಜನಾ ಟ್ಯಾಂಕರ್‌ಗಳಲ್ಲಿ ವಿರ್ಸಜಿಸಬೇಕು ಎಂದು ತಿಳಿಸಿದ್ದಾರೆ.

ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ, ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ಸ್ಯಾನಿಟೈಜೇಷನ್ ಮಾಡುವುದು ಹಾಗೂ ದರ್ಶನಕ್ಕಾಗಿ ಆಗಮಿಸುವ ಭಕ್ತರಿಗೆ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸಬೇಕು. ಭಕ್ತರು ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು. ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಈ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.