ಯಾದಗಿರಿ: ‘ಮಹಿಳೆಯರು ಸ್ವಾವಲಂಬಿಗಳಾಗಲು ಕೌಶಲಾಭಿವೃದ್ಧಿ ಹಾಗೂ ಉದ್ಯಮಶೀಲತೆ ಅಗತ್ಯವಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ಹೇಳಿದರು.

ತಾಲ್ಲೂಕಿನ ಬಂದಳ್ಳಿ ಗ್ರಾಮದಲ್ಲಿ ಶುಕ್ರವಾರ ಮಹಿಳಾ ದಿನಾಚರಣೆ, ಸಮುದಾಯ ನಿರ್ವಹಿತ ತರಬೇತಿ ಕೇಂದ್ರ ಹಾಗೂ ಯಾದವ ವನಧನ್ ಅಭಿವೃದ್ಧಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

‘ಒಂದು ಗ್ರಾಮ ಒಂದು ಉತ್ಪನ್ನ ಯೋಜನೆಯನ್ನು ಎಲ್ಲಾ ಗ್ರಾಮ ಪಂಚಾಯಿತಿಗಳು ಸ್ವ ಸಹಾಯ ಗುಂಪುಗಳ ಮೂಲಕ ಪ್ರಯೋಜನ ಪಡೆದುಕೊಳಬೇಕು’ ಎಂದರು.

ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ ಮಾತನಾಡಿ, ‘ಮಹಿಳೆಯರು ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳು ಮತ್ತು ಸ್ವ ಸಹಾಯ ಸಂಘಗಳ ಮೂಲಕ ಸ್ವಾವಲಂಬನೆ ಬದುಕು ಸಾಧಿಸಬೇಕು’ ಎಂದು ಹೇಳಿದರು.

ಕೌಶಲಾಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಬಸಪ್ಪ ಅವರು ಸ್ವ ಸಹಾಯ ಸಂಘದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಿಸಿದರು. ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾ ಅಧಿಕಾರಿ ಸಂತೋಷ್ ಶೇಷಲು ಅವರು ಬಹುಮಾನ ವಿತರಿಸಿದರು. ಉತ್ತಮವಾಗಿ ಕಾರ್ಯನಿರ್ವಹಿಸಿದ ಜಿಪಿಎಲ್ಎಫ್, ಸ್ವಸಹಾಯ ಗುಂಪುಗಳ ಪ್ರತಿನಿಧಿಗಳಿಗೆ ಸನ್ಮಾನಿಸಲಾಯಿತು.

ಎಂಕೆಪಿಸಿ ನಿರ್ದೇಶಕರಾದ ಸುಗಂಧಮ್ಮಾ, ಶರಣಮ್ಮ ಪಾರ್ವತಿ, ಎನ್ಆರ್ಎಲ್ಎಂ ಸಿಬಂದ್ದಿ ಗಿರೀಶ್, ಕಾವೇರಿ, ಸಿದ್ರಾಮಪ್ಪ, ದತ್ತಾತ್ರೇಯ ಸೇರಿ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.