ಬಳಿಚಕ್ರ (ಸೈದಾಪುರ): ‘ಪ್ರಾಮಾಣಿಕ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರ ವರ್ಗಾವಣೆ ಮಾಡುವ ವದಂತಿ ಹರಡಿದ್ದು, ಸರ್ಕಾರ ಅವರನ್ನು ವರ್ಗಾಯಿಸಬಾರದು. ಹಾಗೇ ಮಾಡಿದರೆ ಉಗ್ರ ಹೋರಾಟ ಮಾಡಲಾಗುವುದು’ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ತಾಲ್ಲೂಕು ಸಂಚಾಲಕ ಆಂಜನೇಯ ಬಳಿಚಕ್ರ ಎಚ್ಚರಿಕೆ ನೀಡಿದರು.

ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ ಎಸ್ಪಿ ಅವರು ಅಕ್ರಮ ಮರಳು ದಂಧೆ, ಇಸ್ಪೀಟ್, ಜೂಜಾಟ, ಮಟಕಾ ಇನ್ನಿತರ ಸಮಾಜ ಹಾಳು ಮಾಡುವ ಕೆಲಸ ಮಾಡುವವರನ್ನು ಮಟ್ಟ ಹಾಕುತ್ತಿದ್ದಾರೆ. ಅತ್ಯಂತ ಹಿಂದುಳಿದ ಜಿಲ್ಲೆಗೆ ಆಗೊಮ್ಮೆ ಈಗೊಮ್ಮೆ ಪ್ರಾಮಾಣಿಕ, ದಕ್ಷ ಅಧಿಕಾರಿಗಳು ಬರುತ್ತಿದ್ದು, ಅವರನ್ನೂ ಸಹ ಹೀಗೆ ದಿಢೀರ್ ವರ್ಗಾವಣೆ ಮಾಡಿದರೆ ಜಿಲ್ಲೆಯ ಅಭಿವೃದ್ಧಿ ಆಗುವುದಾದರೂ ಹೇಗೆ? ಯಾವಾಗ? ಎಂಬುದು ಸಾರ್ವಜನಿಕರಿಗೆ ತಿಳಿಯದಂತಾಗಿದೆ. ಆದ್ದರಿಂದ ವರ್ಗಾವಣೆ ವದಂತಿಗೆ ಸರ್ಕಾರ ತೆರೆ ಎಳೆಯಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.