‘ಮಕ್ಕಳಿಗೆ ವಿಶೇಷ ಬೋಧನೆ ಮಾಡಿ’

ಶುಕ್ರವಾರ, ಜೂಲೈ 19, 2019
24 °C
ಅಧಿಕಾರಿ, ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಆನಂದ್‌ ಸಲಹೆ

‘ಮಕ್ಕಳಿಗೆ ವಿಶೇಷ ಬೋಧನೆ ಮಾಡಿ’

Published:
Updated:
Prajavani

ಯಾದಗಿರಿ: ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ಬೋಧನೆ ಮಾಡುವ ಮೂಲಕ ಅವರ ಭವಿಷ್ಯ ಉಜ್ವಲಗೊಳಿಸಬೇಕು ಎಂದು ನವದೆಹಲಿ ಎಫ್‍ಎ, ಡಿಬಿಟಿ, ಎಂಓಇಎಸ್ ಆ್ಯಂಡ್ ಡಿಎಸ್‍ಟಿ ಹೆಚ್ಚುವರಿ ಕಾರ್ಯದರ್ಶಿ ಹಾಗೂ ಜಿಲ್ಲೆಯ ನೋಡಲ್ ಅಧಿಕಾರಿ ಬಿ.ಆನಂದ್ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹತ್ವಾಕಾಂಕ್ಷೆ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಿಕ್ಷಣ, ಆರೋಗ್ಯ, ಕೃಷಿ, ಮೂಲಸೌಕರ್ಯ, ಆರ್ಥಿಕ ಹಾಗೂ ಕೌಶಲ್ಯ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮತ್ತು ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

5ನೇ ತರಗತಿ ಪಾಸಾದ ಎಲ್ಲ ಮಕ್ಕಳು ಕಡ್ಡಾಯವಾಗಿ 6ನೇ ತರಗತಿಗೆ ದಾಖಲಾಗಬೇಕು. ಅದೇ ರೀತಿ 8ನೇ ತರಗತಿ ಪಾಸಾದ ಎಲ್ಲ ಮಕ್ಕಳು 9ನೇ ತರಗತಿಗೆ ಹಾಜರಾಗುವಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಗ್ರಾಮ ಪಂಚಾಯಿತಿಗಳ ನೆರವಿನೊಂದಿಗೆ ಶೌಚಾಲಯಗಳು ಪ್ರತಿದಿನ ಬಳಕೆಗೆ ಯೋಗ್ಯವಾಗಿರುವಂತೆ ಹಾಗೂ ನೀರು ಸರಬರಾಜು ಆಗುವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.

ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ ಸೇರಿದಂತೆ ಮೂಲಸೌಕರ್ಯ ಕಲ್ಪಿಸುವ ಮೂಲಕ ಮಕ್ಕಳು ಶಾಲೆ ಬಿಡದಂತ ವಾತಾವರಣ ನಿರ್ಮಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಸರ್ವೇ ಮಾಡಿ ಪುನಃ ಶಾಲೆಗೆ ಕರೆತರುವ ಕೆಲಸವನ್ನು ಟಾಟಾ ಟ್ರಸ್ಟ್‌ನವರು ಮಾಡಬೇಕು. ಶಿಕ್ಷಣದಲ್ಲಿ ಮಕ್ಕಳು ನಿಗದಿತ ಸಾಮರ್ಥ್ಯ ಹೊಂದಲು, ಬೋಧನೆ ಮಾಡುವಂತಾಗಲು ಅಜೀಂ ಪ್ರೇಮ್‍ಜಿ ಫೌಂಡೇಷನ್ ವತಿಯಿಂದ ಶಿಕ್ಷಕರಿಗೆ ತರಬೇತಿ ನೀಡಬೇಕು. ಜೊತೆಗೆ ಶೈಕ್ಷಣಿಕ ಪ್ರಗತಿಯಲ್ಲಿ ಹಿಂದುಳಿದ ಜಿಲ್ಲೆಯ 200 ಶಾಲೆಗಳನ್ನು ಗುರುತಿಸಿ, ಅಭಿವೃದ್ಧಿಪಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ.ಅನಿಲ್‍ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ್ ಬಿರಾದಾರ, ಟಾಟಾ ಟ್ರಸ್ಟ್, ಅಜೀಂ ಪ್ರೇಮ್‍ಜಿ ಫೌಂಡೇಷನ್, ಸೆಲ್ಕೊ, ಬಿಇಎಲ್, ಎಂಆರ್ ಪಿಎಲ್-ಸಿಎಸ್‍ಆರ್, ಎಚ್‍ಪಿಸಿಎಲ್-ಸಿಎಸ್‍ಆರ್ ರಾಜ್ಯ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !