ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಕ್ಕೊ; ತಾಲ್ಲೂಕು ಮಟ್ಟಕ್ಕೆ ಆಯ್ಕೆ

Last Updated 23 ಸೆಪ್ಟೆಂಬರ್ 2022, 5:01 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ನಾರಾಯಣಪುರ: ಸಮೀಪದ ಬಪ್ಪರಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕೊಕ್ಕೊ ಆಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ದೈಹಿಕ ಶಿಕ್ಷಣ ಶಿಕ್ಷಕ ಮಲ್ಲಿಕಾರ್ಜುನ ಬಂಗಾರಗುಂಡ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಾದ ಮಲ್ಲಿಕಾರ್ಜುನ, ಗೂಳಪ್ಪ, ಜಗದೀಶ, ಬಂಡೆಪ್ಪ, ಭಾಗಪ್ಪ, ಸಂಗಪ್ಪ, ಬಸವರಾಜ, ಪರಸಪ್ಪ, ಮೌನೇಶ, ಕಾಂತಪ್ಪ, ನಿಂಗಪ್ಪ, ಬಸವರಾಜ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಮುಖ್ಯಶಿಕ್ಷಕ ಬಸನಗೌಡ ಪೊಲೀಸಪಾಟೀಲ, ದೈಹಿಕ ಶಿಕ್ಷಣ ಶಿಕ್ಷಕ ಮಲ್ಲಿಕಾರ್ಜುನ ಬಂಗಾರಗುಂಡ, ಬಸನಗೌಡ ಪಾಟೀಲ, ಶಿವಾನಂದ, ಪರಮಾನಂದ, ಹಣಮಂತ್ರಾಯ, ಬ್ರಹ್ಮಕುಮಾರ, ಮುತ್ತು ದೊರೆ ಸೇರಿದಂತೆ ಶಿಕ್ಷಕರು, ಎಸ್ಡಿಎಂಸಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT