ಮಂಗಳವಾರ, ಡಿಸೆಂಬರ್ 6, 2022
21 °C

ಬಳಿಚಕ್ರ: ಗ್ರಾಮೀಣ ಕ್ರೀಡಾಕೂಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೈದಾಪುರ: ‘ಗ್ರಾಮೀಣ ಪ್ರತಿಭೆಗಳ ಅನಾವರಣಕ್ಕೆ ಸರ್ಕಾರ ಮುಂದಾಗಿರುವುದು ಉತ್ತಮ ಕಾರ್ಯ’ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನುರಾಧ ಅಭಿಪ್ರಾಯಪಟ್ಟರು.

ಸಮೀಪದ ಬಳಿಚಕ್ರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ ರಾಜ್ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಯಿಂದ ಆಯೋಜಿಸಿದ ಗ್ರಾಮೀಣ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ದೇಶಿಯ ಕ್ರೀಡೆಗಳಾದ ಕಬ್ಬಡಿ, ಕೊಕ್ಕೊ, ಎತ್ತಿನ ಬಂಡಿ, ಕುಸ್ತಿಯಂತಹ ಕ್ರೀಡೆಗಳಿಗೆ ಉತ್ತೇಜನ ನೀಡಲು ಪಂಚಾಯಿತಿ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಗ್ರಾಮೀಣ ಕ್ರೀಡಾಕೂಟ ಆಯೋಜನೆ ಮಾಡಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಾತಿಮಾ.ಬಿ, ಉಪಾಧ್ಯಕ್ಷೆ ಗಂಗಮ್ಮ, ಕಾರ್ಯದರ್ಶಿ ಕೆ.ಪ್ರಭು, ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ, ತಾಯಪ್ಪ ಬೊಮ್ಮಣ್ಣೋರ್, ದೈಹಿಕ ಶಿಕ್ಷಣ ಶಿಕ್ಷಕರು
ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು