ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅವಶ್ಯ: ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್

ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ, 7ರಂದು ಸಮರೋಪ
Last Updated 5 ಮಾರ್ಚ್ 2021, 16:49 IST
ಅಕ್ಷರ ಗಾತ್ರ

ಯಾದಗಿರಿ: ‘ದೈಹಿಕ ಮತ್ತು ಮಾನಸಿಕ ಆರೋಗ್ಯ ಸುಧಾರಣೆಯಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ. ಪೊಲೀಸ್ ಸಿಬ್ಬಂದಿ ಮೂರು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟದಲ್ಲಿ ಭಾಗವಹಿಸಿ ಉತ್ತಮ ರೀತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಕ್ರೀಡಾಕೂಟ ಯಶಸ್ವಿಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್., ಅವರು ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ- 2021ಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಪೊಲೀಸರು ಕೆಲಸದ ಒತ್ತಡದಲ್ಲಿದ್ದರೂ ಸಮಾಜದ ಒಳಿತಿಗಾಗಿ, ತಮ್ಮ ಕುಟುಂಬವನ್ನು ಮರೆತು ಹಗಲಿರುಳು ದುಡಿಯುತ್ತಾರೆ. ಪೊಲೀಸರು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮನಸ್ಸು ಉಲ್ಲಾಸಿತಗೊಳ್ಳುತ್ತದೆ’ ಎಂದು ಹೇಳಿದರು.

‘ಪೋಷಕರು ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಕ್ಕಳಿಗೆ ಪ್ರೋತ್ಸಾಹಿಸಿದಲ್ಲಿ ಮಾತ್ರ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ. ಹೀಗಾಗಿ ಪೋಷಕರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಮಾತನಾಡಿ, ‘ಉತ್ತಮ ದೈಹಿಕ ಕ್ಷಮತೆ ಇದ್ದರೆ ವೃತ್ತಿಬದುಕು ಹಾಗೂ ವೈಯಕ್ತಿಕ ಬದುಕಿನಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಆದ್ದರಿಂದ ಪೊಲೀಸರು ದೈಹಿಕ ಸದೃಢತೆಗೆ ಒತ್ತು ಕೊಡಬೇಕು’ ಎಂದುಕಿವಿಮಾತು ಹೇಳಿದರು.

ಇದೇ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಐಎಎಸ್ ಪ್ರೊಬೇಷನರಿ ಆಶ್ವೀಜಾ ಸೇರಿದಂತೆ ಜಿಲ್ಲೆಯ ಪೊಲೀಸ್ ಇಲಾಖೆಯ ವಿವಿಧ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT