ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಒತ್ತಡ ನಿವಾರಣೆಗೆ ಕ್ರೀಡಾಕೂಟ ಸಹಕಾರಿ: ಯಾದಗಿರಿ ಡಾ. ಸುಶೀಲಾ

ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ
Published 18 ಮಾರ್ಚ್ 2024, 7:44 IST
Last Updated 18 ಮಾರ್ಚ್ 2024, 7:44 IST
ಅಕ್ಷರ ಗಾತ್ರ

ಯಾದಗಿರಿ: ‘ಮನುಷ್ಯನ ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡಾಕೂಟಗಳು ಹೆಚ್ಚಿನ ಸಹಕಾರಿ. ಸರ್ಕಾರಿ ನೌಕರರು ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ಆರೋಗ್ಯ ಉತ್ತಮ ಪಡಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ., ಸಲಹೆ ನೀಡಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಸಂಯುಕ್ತಾಶ್ರಯದಲ್ಲಿ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಲ್ಲಿ ಆಯೋಜಿಸಿರುವ ಕ್ರೀಡಾಕೂಟದಲ್ಲಿ ಎಲ್ಲರೂ ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು. ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಬೇಕು’ ಎಂದು ಸಲಹೆ ನೀಡಿದರು.

‘ಕೆಲಸದ ವೇಳೆ ಒತ್ತಡದ ಸನ್ನಿವೇಶಗಳು ನಿರ್ಮಾಣವಾಗುತ್ತದೆ. ಒತ್ತಡದಿಂದ ಹೊರಬರಲು ಕ್ರೀಡೆಯಲ್ಲಿ ಭಾಗವಹಿಸಬೇಕು. ಈಗಾಗಲೇ ಲೋಕಸಭಾ ಚುನಾವಣೆ ಘೋಷಣೆಯಾದ ಕಾರಣ ಚುನಾವಣೆ ಕರ್ತವ್ಯಕ್ಕೆ ನೇಮಿಸಿದ ಸಿಬ್ಬಂದಿ ನಿಷ್ಠೆಯಿಂದ ಕೆಲಸ ನಿರ್ವಹಿಸಬೇಕು’ ಎಂದರು.

ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪುರುಷ ನೌಕರರು ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು
ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪುರುಷ ನೌಕರರು ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ಅಧ್ಯಕ್ಷ ಮಹಿಪಾಲರೆಡ್ಡಿ ಮಾಲಿಪಾಟೀಲ ಮಾತನಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಂಘದ ಕೋಶಾಧ್ಯಕ್ಷ ಯಾಮರೆಡ್ಡಿ, ಆರ್.ಎಂ.ನಾಟೇಕರ್, ಬಸವರಾಜ ಯಡ್ಡಳ್ಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ, ರಾಯಪ್ಪಗೌಡ, ಸಂಜು ದರ್ಬಾರಿ, ಸಂತೋಷ ನಿರೆಟಿ, ಮಲ್ಲೇಶ, ವೆಂಕಟೇಶ ಎಂ. ಹಿರೇನೂರ್, ಹಂಪೇಶ, ಗೋವಿಂದ ಮೂರ್ತಿ, ಕೃಷ್ಣಾರೆಡ್ಡಿ, ಅಶೋಕ ಕೆಂಭಾವಿ, ನಾರಾಯಣರಡ್ಡಿ ಭಾಗವಹಿಸಿದ್ದರು.

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಕ್ರೀಡಾಜ್ಯೋತಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟಪ್ಪಗೋಳ ಸ್ವೀಕರಿಸಿದರು
ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಕ್ರೀಡಾಜ್ಯೋತಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟಪ್ಪಗೋಳ ಸ್ವೀಕರಿಸಿದರು

ಚಂದ್ರಶೇಖರ ಗೋಗಿ ತಂಡವು ನಾಡಗೀತೆ ಹಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT