ಸುರಪುರ: ‘ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಸದೃಢತೆ, ಶಿಸ್ತು, ಏಕಾಗ್ರತೆ ಬೆಳಸಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ’ ಎಂದು ರಂಗಂಪೇಟೆಯ ಸಮೂಹ ಸಂಪನ್ಮೂಲ ವ್ಯಕ್ತಿ ಚನ್ನಪ್ಪ ಕ್ಯಾದಗಿ ಹೇಳಿದರು.

ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಶರಣಬಸವ ವಸತಿ ಶಾಲೆಯ 14 ನೇ ವಾರ್ಷಿಕ ಕ್ರೀಡೋತ್ಸವದಲ್ಲಿ ಅವರು ಮಾತನಾಡಿದರು.

‘ಶಾಲಾ-ಕಾಲೇಜುಗಳಲ್ಲಿ ಪಠ್ಯದ ಜತೆಗೆ ಕ್ರೀಡೆಗಳಲ್ಲಿ ತೊಡಗಿಸಿಕೊಂಡರೆ ಯುವ ಸಮೂಹ ಸದೃಢವಾಗಿ ಬೆಳೆಯಲು ಸಾಧ್ಯ. ಕ್ರೀಡೆಯಿಂದ ಆತ್ಮಸ್ಥೈರ್ಯ ವೃದ್ಧಿಯಾಗುತ್ತದೆ ಹಾಗೂ ಕಲಿಕೆಗೆ ಪೂರಕವಾಗುತ್ತದೆ’ ಎಂದರು.

ದೈಹಿಕ ಶಿಕ್ಷಣ ಶಿಕ್ಷಕ ಭೀಮರಾಯ ಗೋನಾಳ ಮಾತನಾಡಿ, ‘ಆಧುನಿಕ ಶಿಕ್ಷಣದಲ್ಲಿ ಕ್ರೀಡೆಯು ಅತ್ಯಂತ ಮಹತ್ವದ ಸ್ಥಾನ ಹೊಂದಿದೆ’ ಎಂದರು.

ಬಸವರಾಜಪ್ಪ ಅಪ್ಪ ಪದವಿ ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ನಾನಾಗೌಡ ದೇಸಾಯಿ ಎಸ್ಬಿಆರ್ ಸಂಸ್ಥೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗಳನ್ನು ವಿವರಿಸಿದರು.

ಮುಖ್ಯ ಶಿಕ್ಷಕ ರೇವಪ್ಪ ಪಾಟೀಲ ಮಾತನಾಡಿದರು. ಶರಣಬಸವ ವಸತಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿವೇಕ ಗಂಜಿ, ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ ಗರಡಶೆಟ್ಟಿ, ಪ್ರಭುಗೌಡ ಲಕ್ಕಶೆಟ್ಟಿ, ಸಂಸ್ಥೆಯ ಎಲ್ಲಾ ವಿಭಾಗದ ಪ್ರಾಂಶುಪಾಲರು, ಮುಖ್ಯಸ್ಥರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.